ಮಂಗಳವಾರ, ಅಕ್ಟೋಬರ್ 27, 2020
22 °C

ಖಾತೆ ಬದಲಾವಣೆ: ಶ್ರೀರಾಮುಲುಗೆ ಸಮಾಜ ಕಲ್ಯಾಣ, ಸುಧಾಕರ್‌ಗೆ ಆರೋಗ್ಯ ಇಲಾಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಮುಖ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದು, ಬಿ.ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಿದ್ದು, ಡಾ.ಕೆ.ಸುಧಾಕರ್ ಅವರಿಗೆ ಆರೋಗ್ಯ ಖಾತೆ ಹಂಚಿಕೆ ಮಾಡಲಾಗಿದೆ.

ಉಪಮುಖ್ಯಮಂತ್ರಿ ಗೋವಿಂದಕಾರಜೋಳ ಅವರ ಬಳಿ ಲೋಕೋಪಯೋಗಿ ಖಾತೆ ಉಳಿದಿದೆ. ರಾಮುಲು ಬಳಿ ಇದ್ದ ಹಿಂದುಳಿದ ವರ್ಗಗಳ ಖಾತೆ ಮುಖ್ಯಮಂತ್ರಿ ತಮ್ಮ ಬಳಿ ಇಟ್ಟುಕೊಂಡಿದ್ದಾರೆ.

ಕೋವಿಡ್‌ ಬಗ್ಗೆ ವೈಜ್ಞಾನಿಕ ಮಾಹಿತಿಯ ಜತೆಗೆ ವೈದ್ಯರು ಮತ್ತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುವ ಸಾಮರ್ಥ್ಯ ಇದ್ದರಷ್ಟೇ, ಅದರ ನಿರ್ವಹಣೆ ಸುಗಮವಾಗಬಲ್ಲದು ಎಂಬ ಕಾರಣಕ್ಕೆ ಈ ಬದಲಾವಣೆ ಮಾಡಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು