ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿ.ವಿಗಳ ಪದವಿ ಪರೀಕ್ಷೆ: ಮುಂದೂಡಲು ಸೂಚನೆ

Last Updated 16 ಫೆಬ್ರುವರಿ 2022, 20:11 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಕಾರಣ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಕುಲಸಚಿವರಿಗೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಸೂಚಿಸಿದ್ದಾರೆ.

‘ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದವು. ಆದರೆ, ಮೇಲೆ ಉಲ್ಲೇಖಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿ ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ’ ಎಂದು ಅವರು ಬುಧವಾರ ತಿಳಿಸಿದ್ದಾರೆ.

ಬಹುತೇಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪಾಠ– ಪ್ರವಚನ ಮುಗಿಯವ ಮೊದಲೇ ಮೊದಲ ಸೆಮಿಸ್ಟರ್‌ ಪೂರ್ಣಗೊಳಿಸಿ, ಪರೀಕ್ಷೆಗಳನ್ನು ನಡೆಸಲು ಮುಂದಾದ ಬಗ್ಗೆ ‘ಪ್ರಜಾವಾಣಿ’ಯ ಫೆ. 6ರ ಸಂಚಿಕೆಯಲ್ಲಿ ‘ಪಾಠವೇ ಮುಗಿದಿಲ್ಲ: ಪರೀಕ್ಷೆಗೆ ಆತುರ’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT