ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿಗೆ ಬಡತನ ಮಾನದಂಡವಾಗಲಿ: ಎಚ್‌ಡಿಕೆ

Last Updated 28 ನವೆಂಬರ್ 2022, 19:12 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಮೀಸಲಾತಿ ನೀಡಲುಜನಸಂಖ್ಯೆಗಿಂತ ಬಡತನವೇ ಮುಖ್ಯಮಾನದಂಡ ಆಗಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

ತಾಲ್ಲೂಕಿನ ನಂದಿ ಗ್ರಾಮದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಆರ್ಥಿಕವಾಗಿ ಹಿಂದುಳಿದವರು ಎನ್ನುವ ಕಾರಣಕ್ಕೆ ಶೇ 10ರಷ್ಟು ಮೀಸಲಾತಿ ನೀಡಲಾಗಿದೆ. ಆ ಸಮಾಜದರು ನಮ್ಮಲ್ಲಿ ಎಷ್ಟು ಜನರು ಇದ್ದಾರೆ ಎನ್ನುವ ಚರ್ಚೆ ಮಾಡಿದರೆ ಅದು ಎಲ್ಲಿಗೊ ಹೋಗುತ್ತದೆ’ ಎಂದರು.

‘ಮೀಸಲಾತಿಗಾಗಿಪಂಚಮಸಾಲಿ ಮತ್ತು ಕುರುಬ ಸಮಾಜ ಹೋರಾಟ ನಡೆಸುತ್ತಿವೆ. ಜನಸಂಖ್ಯೆ ಆಧಾರದಲ್ಲಿ ಶೇ 12ರಷ್ಟು ಮೀಸಲಾತಿ ನೀಡುವಂತೆ ಒಕ್ಕಲಿಗರು ಸಹ ಆಗ್ರಹಿಸುತ್ತಿದ್ದಾರೆ. ಒಕ್ಕಲಿಗ ಸಮಾಜದ ಜಾತಿ, ಉಪಜಾತಿಗಳ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಮಾಹಿತಿ ಪಡೆದು ಆ ಆಧಾರದಲ್ಲಿ ಸರ್ಕಾರದ ಗಮನ ಸೆಳೆಯುವಂತೆ ಸಮುದಾಯದ ಸ್ವಾಮಿಗಳಲ್ಲಿ ಮನವಿ ಮಾಡಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT