ಮಂಗಳವಾರ, ಏಪ್ರಿಲ್ 20, 2021
27 °C

‘ಆ’ ಸಚಿವರ ತವರಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಸಚಿವರೊಬ್ಬರು ಮಹಿಳೆಯೊಂದಿಗೆ ಬೆತ್ತಲೆಯಾಗಿ ಖಾಸಗಿ ಕ್ಷಣಗಳನ್ನು ಹಂಚಿಕೊಂಡಿರುವ ದೃಶ್ಯಗಳಿರುವ ಸಿ.ಡಿ. ಬಯಲಾಗುತ್ತಿದ್ದಂತೆಯೇ ಹಾಗೂ ಅದು ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆಯೇ, ಅವರ ತವರು ಕ್ಷೇತ್ರದಲ್ಲಿ ವಿದ್ಯುತ್‌ ಕಡಿತ ಮಾಡಲಾಗುತ್ತಿದೆ.

ಟಿವಿಗಳಲ್ಲಿ ಪ್ರಸಾರವಾಗುತ್ತಿರುವ ‘ಆ ದೃಶ್ಯ’ಗಳನ್ನು ಕ್ಷೇತ್ರದ ಜನರು ನೋಡಬಾರದು ಎಂಬ ಕಾರಣಕ್ಕೆ ಹೀಗೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ಇದರಲ್ಲಿ ಸಚಿವರು ಅಥವಾ ಅವರ ಕಡೆಯವರು ಪ್ರಭಾವ ಬೀರಿದ್ದಾರೆ. ಹೆಸ್ಕಾಂ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ ಎಂದು ಅಲ್ಲಿನ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಟಿವಿಗಳಲ್ಲಿ ವರದಿಯಾದ ವಿಡಿಯೊ ತುಣುಕುಗಳು ವಾಟ್ಸ್‌ಆ್ಯಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು