ಗುರುವಾರ , ಆಗಸ್ಟ್ 18, 2022
25 °C

ಉಕ್ರೇನ್‌ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಪ್ರವೇಶ: ಪ್ರಭಾಕರ ಕೋರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಯುದ್ಧಪೀಡಿತ ಉಕ್ರೇನ್‌ನಿಂದ ವಾಪಸಾಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಸರ್ಕಾರದ ಸೂಚನೆ ಹಾಗೂ ನಿಯಮಗಳಿಗೆ ಅನುಗುಣವಾಗಿ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ನೀಡಲಾಗುವುದು’ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರೂ ಆಗಿರುವ ಕೋಡ್‌ಯುನಿಕ್ (ಕರ್ನಾಟಕ ರಾಜ್ಯ ಎಲ್ಲ ಡೀಮ್ಡ್ ವಿಶ್ವವಿದ್ಯಾಲಯಗಳ ಒಕ್ಕೂಟ) ಅಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದ್ದಾರೆ.

ಈ ಬಗ್ಗೆ ಬುಧವಾರ ಪ್ರಕಟಣೆ ನೀಡಿರುವ ಅವರು, ‘ಉಕ್ರೇನ್‌ನಲ್ಲಿ ಭಾರತೀಯ ವೈದ್ಯ ವಿದ್ಯಾರ್ಥಿಗಳು ಶಿಕ್ಷಣವನ್ನು ಮಧ್ಯದಲ್ಲಿಯೇ ತೊರೆದು ವಾಪಸಾಗುವಂತಹ ಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ. ಆದರೆ, ಅವರ ಮುಂದಿನ ವ್ಯಾಸಂಗಕ್ಕೆ ಯಾವುದೇ ತೊಂದರೆ ಆಗದಂತೆ ಕೇಂದ್ರ ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ನಾವು ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿರುವಂತೆ ಪ್ರವೇಶ ಒದಗಿಸಲಿದ್ದೇವೆ’ ಎಂದು ಹೇಳಿದ್ದಾರೆ.

‘ನಮ್ಮ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಕರೆ ತಂದ ಪ್ರಧಾನಿ ಅವರಿಗೆ ಅಭಿನಂದನೆ  ಸಲ್ಲಿಸುತ್ತೇನೆ. ವಿದ್ಯಾರ್ಥಿಗಳು ಹತಾಶರಾಗದೆ, ವೈದ್ಯರಾಗಬೇಕು ಎನ್ನುವ ಕನಸನ್ನು ಭಾರತದಲ್ಲೇ ನನಸು ಮಾಡಿಕೊಳ್ಳಬಹುದು. ಧೈರ್ಯ ಕಳೆದುಕೊಳ್ಳಬಾರದು’ ಎಂದು ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು