ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ 15ರಂದು ಪ್ರತಿಭಟನೆ
ಬೆಂಗಳೂರು: ಕಲ್ಯಾಣ ಕರ್ನಾಟಕದ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಇದೇ 15ರಂದು ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ರಾಜ್ಯ ಸರ್ಕಾರ 1995ರಿಂದ 2015ರವರೆಗಿನ ಎಲ್ಲ ಕನ್ನಡ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಬೇಕು, 371ಜೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ಬಳಕೆಯಾಗದೆ ಉಳಿದಿರುವ ನಿಧಿಯನ್ನು ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಏಳಿಗೆಗಾಗಿ ಶೈಕ್ಷಣಿಕ ನಿಧಿಯೆಂದು ಘೋಷಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ ಎಂದು ಕಲ್ಯಾಣ ಕರ್ನಾಟಕದ ವಿಭಾಗೀಯ ಅಧ್ಯಕ್ಷ ಸುನಿಲ್ ಹುಡುಗಿ ಹೇಳಿದರು.
‘ನಮ್ಮ ಬೇಡಿಕೆಗಳಿಗೆ ಸರ್ಕಾರ ಮತ್ತು ಶಿಕ್ಷಣ ಸಚಿವರು ಸ್ಪಂದಿಸದೆ ಮೌನ ತಾಳಿದ್ದಾರೆ. ಹೀಗಾಗಿ, ಎಲ್ಲ ಕನ್ನಡ ಮಾಧ್ಯಮ ಶಾಲೆಗಳನ್ನು ಒಂದು ದಿನ ಸಾಂಕೇತಿಕವಾಗಿ ಬಂದ್ ಮಾಡಲು ತೀರ್ಮಾನಿಸಿದ್ದೇವೆ ಎಂದೂ ಅವರು ತಿಳಿಸಿದರು.
‘ಕಲ್ಯಾಣ ಕರ್ನಾಟಕದ ಇಂಗ್ಲಿಷ್ ಮಾಧ್ಯಮ ಶಾಲೆಗಳು ಪ್ರತಿಭಟನೆಗೆ ಬೆಂಬಲ ನೀಡಿವೆ. ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಸ್ವರೂಪದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.