ಶನಿವಾರ, ಜುಲೈ 2, 2022
25 °C

ಪ್ರಕಾಶ ಹುಕ್ಕೇರಿ ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳನ್ನು ಒಳಗೊಂಡಿರುವ ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ‌ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಕಾಶ ಹುಕ್ಕೇರಿ ಅವರು ಇಲ್ಲಿನ‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕ‌ ಚುನಾವಣಾಧಿಕಾರಿ ನಿತೇಶ ಪಾಟೀಲ‌ ಅವರಿಗೆ ಬುಧವಾರ ನಾಮಪತ್ರ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.‌ ಪಾಟೀಲ ಸಾಥ್ ನೀಡಿದರು.

ಮರಾಠಾ ಮಂದಿರದಲ್ಲಿ ಪ್ರಚಾರ ಸಭೆ ನಡೆಸಿದ ನಂತರ ನಾಮಪತ್ರ ಸಲ್ಲಿಕೆಗೆ ಮುಖಂಡರು ‌ಉದ್ದೇಶಿಸಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಅವರು ವಿಶೇಷ ವಿಮಾನದಲ್ಲಿ ಬರುವುದು ತಡವಾದ್ದರಿಂದ ಹಾಗೂ ನಾಮಪತ್ರ ಸಲ್ಲಿಕೆಗೆ ಮಧ್ಯಾಹ್ನ 3ರವರೆಗೆ ಮಾತ್ರ ಅವಕಾಶ ಇರುವುದರಿಂದಾಗಿ ಮೊದಲು ನಾಮಪತ್ರ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು