ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಸೈನಿಕ ಆಸ್ಪತ್ರೆಗಳನ್ನು ಕೋವಿಡ್‌ ಆರೈಕೆ ಕೇಂದ್ರಗಳಾಗಿ ಪರಿವರ್ತಿಸಲು ಮನವಿ

Last Updated 29 ಏಪ್ರಿಲ್ 2021, 12:17 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಹಲವು ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್‌ ಸಮಸ್ಯೆ ತಲೆದೂರಿದೆ.

ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಸೈನಿಕ ಆಸ್ಪತ್ರೆಗಳನ್ನು ತಾತ್ಕಾಲಿಕ ಕೋವಿಡ್‌ ಆರೈಕೆ ಕೇಂದ್ರಗಳಾಗಿ ಪರಿವರ್ತಿಸುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರಿಗೆ ಮನವಿ ಸಲ್ಲಿಸಿರುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್‌ ಮಾಡಿದ್ದಾರೆ.

ಈ ಸಂದರ್ಭದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಹಾಗೂ ಇತರೆ ಮಿಲಿಟರಿ ಎಜನ್ಸಿಗಳಿಂದ ರಾಜ್ಯದಲ್ಲಿ ಅವಶ್ಯಕತೆ ಇರುವ ನಗರಗಳಲ್ಲಿ ಹೊಸ ತಾತ್ಕಾಲಿಕ ಆಸ್ಪತ್ರೆಗಳನ್ನು ನಿರ್ಮಿಸುವಂತೆ ಕೋರಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ.

ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ಮುಂದಿನ ಮೂರು ತಿಂಗಳಲ್ಲಿ ಪಿಎಂ ಕೇರ್ಸ್ ನಿಧಿಯಿಂದ ತೆಗೆದಿರಿಸಿರುವ ಹಣದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ದೇಶದಾದ್ಯಂತ 500 ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಿದೆ’ ಎಂದು ತಿಳಿಸಿದ್ದರು.

ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್‌ಗಾಗಿ ಆನ್‌–ಬೋರ್ಡ್‌ ಆಮ್ಲಜನಕ ಉತ್ಪಾದನೆಗಾಗಿ ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ ವೈದ್ಯಕೀಯ ಆಮ್ಲಜನಕ ಘಟಕದಿಂದ ಕೋವಿಡ್‌ ರೋಗಿಗಳಿಗೆ ಆಮ್ಲಜನಕ ಪೂರೈಸಲಾಗುತ್ತಿದೆ ಎಂದು ಸಚಿವರು ಟ್ವಿಟರ್‌ನಲ್ಲಿ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT