ಸೋಮವಾರ, ಆಗಸ್ಟ್ 8, 2022
24 °C

ಮುಖ್ಯಮಂತ್ರಿಗೆ ಅಡ್ಡಿಪಡಿಸಬೇಡಿ: ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕೆಲಸಕ್ಕೆ ಯಾರೊಬ್ಬರೂ ಅಡ್ಡಿಪಡಿಸಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು.

ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಸ್ತಾವ ರಾಷ್ಟ್ರೀಯ ನಾಯಕರ ಮುಂದಿಲ್ಲ. ಕೋವಿಡ್‌ ಸಂದರ್ಭದಲ್ಲಿ ಜನರ ಆರೋಗ್ಯ ರಕ್ಷಣೆಯೇ ಆದ್ಯ ಕರ್ತವ್ಯ. ಮುಖ್ಯಮಂತ್ರಿಗೆ ಯಾರೂ ತೊಂದರೆ ನೀಡಬಾರದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ಕೋವಿಡ್‌ಗೆ ಬಲಿಯಾದವರ ಕುಟುಂಬಗಳು ಎದುರಿಸುತ್ತಿರುವ ನೋವು ಅರ್ಥವಾಗಿದೆ. ಕೋವಿಡ್‌ ಅನ್ನು ಸರ್ಕಾರ ಸಮರ್ಥವಾಗಿ ನಿರ್ವಹಿಸುತ್ತಿದೆ. ಆಮ್ಲಜನಕದ ಕೊರತೆ ಉಂಟಾಗದಂತೆ ನೋಡಿಕೊಳ್ಳುತ್ತಿದೆ. ಅಧಿಕಾರದ ಸಂದರ್ಭದಲ್ಲಿ ಭ್ರಷ್ಟಾಚಾರ ಮಾಡಿ ರೂಢಿ ಇರುವ ಕಾಂಗ್ರೆಸ್‌, ವಿನಾ ಕಾರಣ ಆರೋಪ ಮಾಡುತ್ತಿದೆ’ ಎಂದು ಕಿಡಿಕಾರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು