ಗುರುವಾರ , ಆಗಸ್ಟ್ 5, 2021
27 °C

ಆರ್ಯ ಈಡಿಗ ಸಮುದಾಯದವರೇ ಮುಂದಿನ ಮುಖ್ಯಮಂತ್ರಿ: ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಆರ್ಯ ಈಡಿಗ ಸಮುದಾಯದವರೇ ಮುಖ್ಯಮಂತ್ರಿ ಆಗುತ್ತಾರೆ’ ಎಂದು ಆರ್ಯ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಭವಿಷ್ಯ ನುಡಿದರು. 

‘ರಾಜ್ಯದಲ್ಲಿ ಏಳು ಜನ ಈಡಿಗ ಸಮುದಾಯದ ಶಾಸಕರಿದ್ದರೂ ಕೇವಲ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ನಾಮಕಾವಸ್ಥೆ ಸಚಿವ ಸ್ಥಾನ ನೀಡಲಾಗಿದೆ. ನಮ್ಮ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ. ರಾಜ್ಯದಲ್ಲಿ ಈಡಿಗ ಸಮುದಾಯಕ್ಕೆ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಅನ್ಯಾಯವಾಗಿದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸದೇ ಹೋದರೆ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತೆ. ಮುಂದಿನ ಚುನಾವಣೆಯಲ್ಲಿ ಸಮುದಾಯದವರೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ. ನಾನು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ’ ಎಂದು ಭವಿಷ್ಯ ನುಡಿದರು.

‘ಹಿಂದುತ್ವ ಬಿಜೆಪಿ, ಆರ್‌ಎಸ್‌ಎಸ್‌ ಅವರದ್ದು ಮಾತ್ರವಲ್ಲ. ಜೀವನ ಪದ್ಧತಿಯೇ ಹಿಂದುತ್ವ’ ಎಂದ ಅವರು, ಸರ್ಕಾರ ಕೂಡಲೇ ಆರ್ಯ ಈಡಿಗ ನಿಗಮ ಮಂಡಳಿ ಸ್ಥಾಪಿಸುವ ಮೂಲಕ ಹಿಂದುಳಿದ ಸಮುದಾಯಕ್ಕೆ ಸಹಾಯ ಮಾಡಬೇಕು ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು