ಶನಿವಾರ, ಏಪ್ರಿಲ್ 1, 2023
23 °C
ಖಾದಿ ಉತ್ಸವಕ್ಕೆ ಮುಖ್ಯಮಂತ್ರಿ ಚಾಲನೆ

ಖಾದಿ, ಗ್ರಾಮೋದ್ಯೋಗಕ್ಕೆ ಆದ್ಯತೆ: ಬಸವರಾಜ ಬೊಮ್ಮಾಯಿ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಖಾದಿಗೆ ಉತ್ತಮ ಭವಿಷ್ಯವಿದೆ. ಯಾರೂ ಭಯ ಪಡುವ ಅವಶ್ಯಕತೆ ಇಲ್ಲ. ಖಾದಿ ಮತ್ತು ಗ್ರಾಮೋದ್ಯೋಗದಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ.‌ ಹೀಗಾಗಿ, ಈ ಬಾರಿಯ ಬಜೆಟ್‌ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ಆದ್ಯತೆ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಭರವಸೆ ನೀಡಿದರು.

ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನದ ಉದ್ಘಾಟಿಸಿ ಅವರು ಮಾತನಾಡಿದರು.

‘ಪಾಲಿಯೆಸ್ಟರ್ ಬಟ್ಟೆಗಳ ಉಪಯೋಗ ಹೆಚ್ಚಾದಾಗ ಖಾದಿ ವಲಯಕ್ಕೆ ತೊಂದರೆಯಾಗಿತ್ತು. ಆದರೆ, ಈಗ ಸಾಕಷ್ಟು ಬದಲಾವಣೆಯಾಗಳಾಗಿವೆ. ಖಾದಿ ಬಟ್ಟೆಗಳು, ಸಾವಯವ ಆಹಾರಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಅಮೆಜಾನ್ ಹಾಗೂ ಪ್ಲಿಪ್ ಕಾರ್ಟ್‌ನಂತಹ ಸಂಸ್ಥೆಗಳು ಖಾದಿ ವಸ್ತುಗಳ ಖರೀದಿಗೆ ಆಸಕ್ತಿವಹಿಸಿವೆ. ನೇರವಾಗಿ ಉತ್ಪಾದಕರಿಂದ ಮಾರುಕಟ್ಟೆಗೆ ಕಳುಹಿಸುವ ವ್ಯವಸ್ಥೆ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

‘ಖಾದಿ ಗ್ರಾಮೋದ್ಯೋಗ ಸಂಸ್ಥೆಯ ಆರ್ಥಿಕವಾಗಿ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಬಾಕಿ ಉಳಿದಿರುವ ಪ್ರೋತ್ಸಾಹಧನದ ಮೊತ್ತ ₹74 ಕೋಟಿ ರೂಪಾಯಿ ಅನುಮೋದನೆ ನೀಡಲಾಗುವುದು’ ಎಂದರು.

ವಿಧಾನಪರಿಷತ್ ಛಲವಾದಿ ನಾರಾಯಣಸ್ವಾಮಿ, ಖಾದಿ ಮಂಡಳಿ ಅಧ್ಯಕ್ಷ ನಾಗರಾಜು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು