ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ಪುಟ್ನಿಕ್‌ ವಿ’ ಲಸಿಕೆ ಪ್ರಯೋಗಕ್ಕೆ ಮೈಸೂರಿನ ಜೆಎಸ್‌ಎಸ್‌ನಲ್ಲಿ ಸಿದ್ಧತೆ

Last Updated 14 ಅಕ್ಟೋಬರ್ 2020, 19:35 IST
ಅಕ್ಷರ ಗಾತ್ರ

ಮೈಸೂರು: ರಷ್ಯಾದಲ್ಲಿ ಅಭಿವೃದ್ಧಿಪಡಿಸಿರುವ ಕೋವಿಡ್‌–19 ಪ್ರಾಯೋಗಿಕ ಲಸಿಕೆ 'ಸ್ಪುಟ್ನಿಕ್‌ ವಿ' ಕ್ಲಿನಿಕಲ್‌ ಟ್ರಯಲ್‌ ನಡೆಸಲು ಇಲ್ಲಿನ ಜೆಎಸ್‌ಎಸ್‌ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಸಿದ್ಧತೆ ನಡೆದಿದೆ.

ಹೈದರಾಬಾದ್‌ನ ಡಾ.ರೆಡ್ಡೀಸ್‌ ಲ್ಯಾಬೊರೇಟರೀಸ್‌ ಸಹಯೋಗದೊಂದಿಗೆ ಕ್ಲಿನಿಕಲ್‌ ಟ್ರಯಲ್‌ ನಡೆಯಲಿದೆ. ಭಾರತದಲ್ಲಿ ಸ್ಪುಟ್ನಿಕ್‌ ವಿ ಲಸಿಕೆಯ ಕ್ಲಿನಿಕಲ್‌ ಟ್ರಯಲ್‌ ನಡೆಸಲು ರಷ್ಯಾದ ಸಾವೆರಿನ್‌ ವೆಲ್ತ್‌ ಫಂಡ್‌ ಸಂಸ್ಥೆಯು ರೆಡ್ಡೀಸ್‌ ಲ್ಯಾಬೊರೇಟರೀಸ್‌ ಜತೆ ಒಪ್ಪಂದ ಮಾಡಿಕೊಂಡಿದೆ.

‘ಸ್ಪುಟ್ನಿಕ್‌ ವಿ ಲಸಿಕೆಯ ಎರಡನೇ ಹಾಗೂ ಮೂರನೇ ಹಂತದ ಕ್ಲಿನಿಕಲ್‌ ಟ್ರಯಲ್‌ಗೆ ಸಹಕಾರ ನೀಡುವಂತೆ ಕೋರಿ ರೆಡ್ಡೀಸ್‌ ಲ್ಯಾಬೊರೇಟರೀಸ್‌ ನಮ್ಮ ಜತೆ ಮಾತುಕತೆ ನಡೆಸಿದೆ’ ಎಂದು ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಪ್ರೊ–ಚಾನ್ಸಲರ್ ಡಾ.ಬಿ.ಸುರೇಶ್ ತಿಳಿಸಿದರು.

‘ಭಾರತೀಯ ಔಷಧ ನಿಯಂತ್ರಣ ಸಂಸ್ಥೆ (ಡಿಜಿಸಿಐ) ಅನುಮತಿ ಲಭಿಸಿದರೆ ಕ್ಲಿನಿಕಲ್‌ ಟ್ರಯಲ್‌ ಆರಂಭವಾಗಲಿದೆ. 21 ರಿಂದ 60 ವರ್ಷ ವಯಸ್ಸಿನೊಳಗಿನ 60 ಸ್ವಯಂ ಸೇವಕರ ಮೇಲೆ ಲಸಿಕೆ ಪ್ರಯೋಗ ನಡೆಯಲಿದೆ. ಈಗಾಗಲೇ ಹಲವು ಸ್ವಯಂಸೇವಕರು ಮುಂದೆ ಬಂದಿದ್ದಾರೆ’ ಎಂದು ಮಾಹಿತಿ ನೀಡಿದರು.

ಜೆಎಸ್‌ಎಸ್‌ನಲ್ಲಿ ಕೋವಿಡ್‌ಗೆ ಸಂಬಂಧಿಸಿದ ‘ಕೋವಿಶೀಲ್ಡ್‌’ ಮತ್ತು ‘ನೋವಾವಾಕ್ಸ್‌’ ಲಸಿಕೆಗಳ ಕ್ಲಿನಿಕಲ್‌ ಟ್ರಯಲ್‌ ಈಗಾಗಲೇ ಪ್ರಗತಿಯಲ್ಲಿದೆ. ನೋವಾವಾಕ್ಸ್‌ ಲಸಿಕೆಯ ಮೂರನೇ ಹಂತದ ಟ್ರಯಲ್‌ಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಂಡಿದೆ. 80 ಸ್ವಯಂಸೇವಕರಿಗೆ ಈ ಲಸಿಕೆ ನೀಡಲಾಗುತ್ತದೆ.

ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ‘ಕೋವಿಶೀಲ್ಡ್‌’ ಲಸಿಕೆಯ ಎರಡನೇ ಹಂತದ ಕ್ಲಿನಿಕಲ್‌ ಟ್ರಯಲ್‌ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮೂರನೇ ಹಂತದ ಟ್ರಯಲ್‌ಗೆ ಸಿದ್ಧತೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT