ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯವರಿಗೆ ವಾಟ್ಸ್ಆ್ಯಪ್ ಯೂನಿವರ್ಸಿಟಿ ಸುಳ್ಳುಗಳೇ ಮೂಲ: ಪ್ರಿಯಾಂಕ್ ಖರ್ಗೆ

ಅಕ್ಷರ ಗಾತ್ರ

ಬೆಂಗಳೂರು: ‘ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ’ ಎಂದು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯನ್ನಾಗಿ ದ್ರೌಪದಿ ಮುರ್ಮುಗೆ ಅವರನ್ನು ಆಯ್ಕೆ ಮಾಡಿರುವ ಕುರಿತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಡಿದ್ದ ಟ್ವೀಟ್‌ಗೆ ಪ್ರಿಯಾಂಕ್ ತಿರುಗೇಟು ಕೊಟ್ಟಿದ್ದಾರೆ.

‘ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ. ದಲಿತ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದೂ ನಾವೇ. ಇಂದು ಆದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡುವುದು ನಾವೇ... ಏಕೆಂದರೆ ನಾವು ಜಾತಿವಾದಿಗಳಲ್ಲಾ - ರಾಷ್ಟ್ರವಾದಿಗಳು. (ವಾಟ್ಸ್ಆ್ಯಪ್‌‌ನಲ್ಲಿ ಬಂದಿದ್ದು)‘ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಟ್ವೀಟ್ ಮಾಡಿದ್ದರು.

ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ‘ಚಿಂತನೆಗಳಿಲ್ಲದ ಬಿಜೆಪಿಯವರಿಗೆ ವಾಟ್ಸ್ಆ್ಯಪ್ ಯೂನಿವರ್ಸಿಟಿಯ ಸುಳ್ಳುಗಳೇ ಮೂಲ. ಅಂದಹಾಗೆ, ಎಸ್‌ಇ/ ಎಸ್‌ಟಿ ಜನಾಂಗದ ₹7000 ಕೋಟಿ, ದಲಿತರ ಪಾಲಿನ ಬೋರ್‌ವೆಲ್‌ ಹೆಸರಲ್ಲಿ ₹431 ಕೋಟಿ, ಭೋವಿ ನಿಗಮದಲ್ಲಿ ₹150 ಕೋಟಿ ಲೂಟಿ ಮಾಡುವುದು ನಿಮ್ಮ ರಾಷ್ಟ್ರವಾದವೇ’ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ, ರಾಷ್ಟ್ರಪತಿ ಚುನಾವಣೆಗೆ ಜಾರ್ಖಂಡ್‌ನ ಮಾಜಿ ರಾಜ್ಯಪಾಲೆ ಮತ್ತು ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇತ್ತ ವಿಪಕ್ಷಗಳು ತಮ್ಮ ಒಮ್ಮತದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರ ಹೆಸರನ್ನು ಘೋಷಿಸಿವೆ.

ಜುಲೈ 18ರಂದು ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT