ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಚುನಾವಣೆ ಬ್ಯಾಲೆಟ್ ಜರ್ನಿ: ಜುಲೈ 18ರಂದು ಮತದಾನ

Last Updated 12 ಜುಲೈ 2022, 16:06 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಮತದಾನದ ಅವಶ್ಯಕ ಸಾಮಾಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್ ಗಳನ್ನು ಮಂಗಳವಾರ ನವದೆಹಲಿಯ ಭಾರತ ಚುನಾವಣಾ ಆಯೋಗದ ಕೇಂದ್ರ ಕಚೇರಿಯಿಂದ ಆಯಾ ರಾಜ್ಯಗಳಿಗೆ ರವಾನಿಸಲಾಯಿತು.

ಕರ್ನಾಟಕದ ‘ಬ್ಯಾಲೆಟ್ ಜರ್ನಿ’ಯ ನೇತೃತ್ವವನ್ನು ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ಅವರು ವಹಿಸಿದ್ದು, ಮಂಗಳವಾರ ಸಂಜೆ ನವದೆಹಲಿಯಿಂದ ಹೊರಟು ರಾತ್ರಿ 8:15 ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿತು.

ಈ ವಿಶೇಷ ‘ಬ್ಯಾಲೆಟ್ ಜರ್ನಿ’ಯ ಮೂಲಕ ರಾಜ್ಯಕ್ಕೆ ತರಲಾದ ಮತದಾನದ ಸಾಮಾಗ್ರಿಗಳನ್ನು ವಿಧಾನಸೌಧದ ಇದಕ್ಕಾಗಿ ಮೀಸಲಿಟ್ಟಿರುವ ಕೊಠಡಿ ಸಂಖ್ಯೆ 108 ರಲ್ಲಿ (Strong Room) ಶೇಖರಿಸಿಡಲಾಯಿತು. ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಸಹಾಯಕ ಚುನಾವಣಾಧಿಕಾರಿ ಶ್ರೀಮತಿ ವಿಶಾಲಾಕ್ಷಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸ್ಟ್ರಾಂಗ್ ರೂಂ ಲಾಕ್‌ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT