ಬೆಂಗಳೂರು: ‘ಇದೇ 18ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ರಾಜ್ಯದ ಮುಖ್ಯಮಂತ್ರಿ, ಸಚಿವರು, ಶಾಸಕರು ಚುನಾವಣಾ ಅಪರಾಧ ಎಸಗಿದ್ದು, ಅವರೆಲ್ಲರ ವಿರುದ್ಧ ಕ್ರಮ ಜರುಗಿಸಬೇಕು’ ಎಂದುಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ನ ರಾಜ್ಯ ಘಟಕ ದೂರು ನೀಡಿದೆ.

‘ಅಪರಾಧ ಎಸಗಿದವರ ವಿರುದ್ಧ ಸೆಕ್ಷನ್ 171ಬಿ (ಮತ ಪಡೆಯಲು ಆಮಿಷ) 171ಸಿ (ಪ್ರಭಾವ ಬೀರಲು ಯತ್ನ), 171 ಇ (ಮತದಾರರಿಗೆ ಆಮಿಷ), 171ಎಫ್ (ಅನಗತ್ಯವಾಗಿ ಪ್ರಭಾವ) ಪ್ರಕಾರ ಕ್ರಮ ಜರುಗಿಸಬೇಕು’ ಎಂದೂ ದೂರಿನಲ್ಲಿ ಒತ್ತಾಯಿಸಲಾಗಿದೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಪಕ್ಷದ ಮುಖಂಡ ವಿ.ಎಸ್. ಉಗ್ರಪ್ಪ, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಯಬೇಕು. ಯಾವುದೇ ಆಮಿಷ, ಒತ್ತಡ ಹಾಕಬಾರದು. ಹಾಕಿದರೆ ಅದು ಅಪರಾಧವಾಗುತ್ತದೆ. ಇದು ಜನತಾ ಪ್ರಾತಿನಿಧ್ಯ ಕಾಯ್ದೆ, ಐಪಿಸಿ ಸೆಕ್ಷನ್ ಹಾಗೂ ಅಧ್ಯಕ್ಷೀಯ ಚುನಾವಣಾ ಕಾಯ್ದೆಯಲ್ಲಿ ಪ್ರಸ್ತಾಪವಾಗಿದೆ’ ಎಂದರು.

‘ಎಲ್ಲ ಶಾಸಕರನ್ನು ಬಿಜೆಪಿಯವರು ಬೆಂಗಳೂರಿನ ಹೋಟೆಲ್‌ಗೆ ಭಾನುವಾರ ಕರೆಸಿ ಆಹಾರ, ಪಾನೀಯ, ಮನರಂಜನೆ ನೀಡಿದ್ದಾರೆ. ಇದೆಲ್ಲದರ ವೆಚ್ಚವನ್ನು ಮುಖ್ಯಮಂತ್ರಿ ಹಾಗೂ ಬಿಜೆಪಿ ವಹಿಸಿಕೊಂಡಿದ್ದು, ಅವರಿಗೆ ಇದೇ ರೀತಿ ಮತದಾನ ಮಾಡಬೇಕು ಎಂದು ತರಬೇತಿ ನೀಡಲಾಗಿದೆ. ಜೊತೆಗೆ ಅವರನ್ನು ಕರೆದೊಯ್ಯಲು ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಮ ಪಂಚಾಯಿತಿ ಮತದಾರರನ್ನು ಬಸ್‌ನಲ್ಲಿ ಕರೆದೊಯ್ದಿದ್ದರೆ ಅವರ ವಿರುದ್ಧ ಕೇಸ್ ದಾಖಲಾಗುತ್ತಿತ್ತು. ಎನ್‌ಡಿಎ ಅಭ್ಯರ್ಥಿ ಸಮ್ಮತಿ ಆಧಾರದ ಮೇಲೆ ಇದನ್ನು ಮಾಡಿದ್ದು, ಈ ವಿಚಾರವಾಗಿ ಪ್ರಕರಣ ದಾಖಲಿಸಬೇಕು. ಹೀಗಾಗಿ, ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ’ ಎಂದರು.

‘ರಾಜ್ಯ ವಿಧಾನಸೌಧದಲ್ಲಿ ನಡೆದ ಮತದಾನದಲ್ಲಿ ಎನ್‌ಡಿಎ ಅಭ್ಯರ್ಥಿಗೆ ದಾಖಲಾಗಿರುವ ಎಲ್ಲ ಮತಗಳನ್ನು ಅಸಿಂಧು ಎಂದು ಪರಿಗಣಿಸಬೇಕು. ಇಲ್ಲಿನ ಸಿಇಒ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನಮ್ಮ ದೂರನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ರವಾನಿಸಲಾಗುವುದಾಗಿ ತಿಳಿಸಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.