ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪೌಷ್ಟಿಕತೆ ನಿವಾರಣೆಗೆ ವಿಶೇಷ ಯೋಜನೆ: ಸಿಎಂ ಬೊಮ್ಮಾಯಿ

Last Updated 31 ಆಗಸ್ಟ್ 2021, 8:22 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಮೂರು ಜಿಲ್ಲೆಗಳಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಇರುವ ಅಪೌಷ್ಟಿಕತೆ ಸಮಸ್ಯೆ ನಿವಾರಣೆಗೆ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಕಲಬುರ್ಗಿ, ರಾಯಚೂರು, ಯಾದಗಿರಿ ಲ ಜಿಲ್ಲೆಗಳಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಅಪೌಷ್ಟಿಕತೆಯ ಸಮಸ್ಯೆ ಜಾಸ್ತಿ ಇರುವುದು ಕಂಡುಬಂದಿದೆ. ಅದನ್ನು ನಿವಾರಿಸಲು ವಿಶೇಷ ಯೋಜನೆಯೊಂದನ್ನು ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಪ್ರತಿ ಮೂರು ತಿಂಗಳಿಗೊಮ್ಮೆ ಕೆಡಿಪಿ ಪ್ರಗತಿ ಪರಿಶೀಲನೆ ಮಾಡಲಾಗುವುದು. ಕಾಲಮಿತಿಯೊಳಗೆ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಬಜೆಟ್ ಹಂಚಿಕೆಯ ಅನುಸಾರ ಬಿಡುಗಡೆ ಮಾಡಿರುವ ಅನುದಾನವನ್ನು ಎಂಟು ಇಲಾಖೆಗಳು ಪೂರ್ಣವಾಗಿ ಇನ್ನೂ ಬಳಕೆ ಮಾಡಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ಅನುದಾನದ ಬಳಕೆಯಲ್ಲಿ ವಿಳಂಬವಾಗಿದೆ. ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ತ್ವರಿತವಾಗಿ ಅನುದಾನ ಬಳಕೆಗೆ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ ಎಂದು ಹೇಳಿದರು.

ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಇಲಾಖಾವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಜನಪರವಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವಂತೆಯೂ ನಿರ್ದೇಶನ ನೀಡಲಾಗಿದೆ ಎಂದರು.

ಆಡಳಿತ ಸುಧಾರಣೆ: ಟಿ.ಎಂ. ವಿಜಯ ಭಾಸ್ಕರ್ ನೇತೃತ್ವದ ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳ ಜಾರಿಗೆ ಸಲಹಾ ಸಮಿತಿ ರಚಿಸಲಾಗುವುದು. ನವೆಂಬರ್ 1ರಿಂದ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT