ಭಾನುವಾರ, ಏಪ್ರಿಲ್ 2, 2023
33 °C

ದೇವಸ್ಥಾನಗಳಲ್ಲಿ ಮೊಬೈಲ್‌ ನಿಷೇಧಿಸುವಂತೆ ಸಚಿವರಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಾಲಯಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸುವಂತೆ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟವು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಮನವಿ ಸಲ್ಲಿಸಿದೆ.

ಒಕ್ಕೂಟದ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಎನ್‌. ದೀಕ್ಷಿತ್‌ ಅವರು ಸಚಿವರನ್ನು ಶನಿವಾರ ಭೇಟಿಮಾಡಿ ಮನವಿ ಸಲ್ಲಿಸಿದರು. ದೇವಸ್ಥಾನಗಳ ಆವರಣದಲ್ಲಿ ಮೊಬೈಲ್‌ ಬಳಕೆಗೆ ಅವಕಾಶ ಇರುವುದರಿಂದ ಪೂಜಾ ಕೆಲಸಗಳು ಹಾಗೂ ಭಕ್ತಾದಿಗಳಿಗೆ ತೊಂದರೆ ಆಗುತ್ತಿದೆ. ಆದ್ದರಿಂದ ದೇವಸ್ಥಾನಗಳ ಆವರಣಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸಿ ಆದೇಶ ಹೊರಡಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.

‘ಪೂಜೆಯ ನಡುವೆಯೇ ರಿಂಗ್‌ ಟೋನ್‌ಗಳ ಶಬ್ಧದಿಂದ ಕಿರಿಕಿರಿ ಉಂಟಾಗುತ್ತಿದೆ. ಫೋಟೊ ತೆಗೆಯುವುದು, ಗರ್ಭಗುಡಿಗೆ ಬೆನ್ನುಹಾಕಿ ಸೆಲ್ಫಿ ತೆಗೆಯುತ್ತಾರೆ. ಇದರಿಂದ ಏಕಾಗ್ರತೆಗೆ ಭಂಗ ಉಂಟಾಗುತ್ತಿದೆ. ಈ ರೀತಿ ಮೊಬೈಲ್‌ ಬಳಕೆಗೆ ಅವಕಾಶ ಕಲ್ಪಿಸುವುದರಿಂದ ಭಕ್ತಿಯಿಂದ ದೇವಸ್ಥಾನಕ್ಕೆ ಬರುವವರಲ್ಲಿ ತಪ್ಪು ಕಲ್ಪನೆ ಮೂಡುವ ಸಾಧ್ಯತೆ ಇದೆ. ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸುವುದರ ಜತೆಗೆ, ಸಾರ್ವಜನಿಕರು ಮೊಬೈಲ್‌ ಇರಿಸಿ ಒಳಕ್ಕೆ ಬರಲು ಸೂಕ್ತ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು