ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅದ್ದೂರಿ ಸ್ವಾಗತ ಕೋರಿದ ಮಂಡ್ಯದ ಜನತೆಗೆ ಧನ್ಯವಾದ ಸಲ್ಲಿಸಿದ ಪ್ರಧಾನಿ ಮೋದಿ

Last Updated 12 ಮಾರ್ಚ್ 2023, 10:31 IST
ಅಕ್ಷರ ಗಾತ್ರ

ಬೆಂಗಳೂರು: ಇಂದು ನಡೆದ ರೋಡ್‌ ಶೋ ವೇಳೆ ತಮಗೆ ಅದ್ದೂರಿ ಸ್ವಾಗತ ಕೋರಿದ ಮಂಡ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ.


ಮಂಡ್ಯದ ರೋಡ್‌ ಶೋ ವಿಡಿಯೊ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಪುಷ್ಪವೃಷ್ಟಿಯೊಂದಿಗೆ ಅಪಾರ ಪ್ರೀತಿ ತೋರಿದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ರೋಡ್‌ ಶೋ ವೇಳೆ ಜನ ತಮ್ಮ ಕಾರಿನತ್ತ ಹೂ ಮಳೆಗೈಯುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.
ಸಾವಿರಾರು ಜನರ ಜಯಘೋಷಗಳ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ನಗರದ ಪ್ರವಾಸಿ ಮಂದಿರದಿಂದ ನಂದ ಟಾಕೀಸ್‌ವರೆಗೆ 1.8 ಕಿ.ಮೀ ರೋಡ್‌ ಶೋ ನಡೆಸಿದರು.


ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಜನರು ಸಾಲುಗಟ್ಟಿ ನಿಂತಿದ್ದರು. ‘ಮೋದಿ ಮೋದಿ’ ಜಯಘೋಷ ಮೊಳಗಿಸಿದ ಜನ ಪ್ರಧಾನಿ ಮೇಲೆ ಹೂವಿನ ಮಳೆಗರೆದರು. ಶ್ವೇತವರ್ಣದ ಜುಬ್ಬಾ ಧರಿಸಿದ್ದ ನರೇಂದ್ರ ಮೋದಿ ಅವರು ಜನರತ್ತ ಕೈಬೀಸುತ್ತಾ ಮುಂದೆ ಸಾಗಿದರು, ತಮ್ಮ ಕಾರಿನ ಮೇಲೆ ಬಿದ್ದಿದ್ದ ಹೂವು ತೆಗೆದು ಜನರ ಮೇಲೆ ಎರಚಿ ಸಂಭ್ರಮಪಟ್ಟರು.


ಪ್ರಧಾನಿ ಟ್ವೀಟ್‌ ಮಾಡಿರುವ ಈ ವಿಡಿಯೊಕ್ಕೆ ಸಾಕಷ್ಟು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ. ನೀವು ನಮ್ಮ ಹೆಮ್ಮೆಯ ಪ್ರಧಾನಿ ಎಂದಿರುವ ಹಲವಾರು ಅಭಿಮಾನಿಗಳು ಮಂಡ್ಯದ ರೋಡ್‌ ಶೋದ ಅನೇಕ ಚಿತ್ರಗಳನ್ನು ಮೋದಿ ಟ್ವೀಟ್‌ನ ಪ್ರತಿಕ್ರಿಯೆ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT