ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷ ಸಂಘಟನೆ: ಪ್ರಧಾನಿ ಮೋದಿ– ಬಿಎಸ್‌ವೈ ಚರ್ಚೆ

Last Updated 26 ಆಗಸ್ಟ್ 2022, 20:59 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಶುಕ್ರವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ, ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆಗಳು ಹಾಗೂಪಕ್ಷ ಸಂಘಟನೆ ಬಗ್ಗೆ ನಾಯಕರು ಚರ್ಚಿಸಿದರು.

ಪ್ರಧಾನಿ ಮೋದಿ ಅವರನ್ನು ಸಂಜೆ 5 ಗಂಟೆಗೆ ಯಡಿಯೂರಪ್ಪ ಭೇಟಿ ಮಾಡಿದರು. ‘ಪ್ರಧಾನಿ ಅವರೊಂದಿಗೆ 20 ನಿಮಿಷಗಳ ಕಾಲ ಮಾತುಕತೆ ನಡೆಸಿದೆ. ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಲಾಯಿತು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು’ ಎಂದು ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.

‘ಪ್ರಧಾನಿ ಅವರು ಸೆಪ್ಟೆಂಬರ್‌ 2ರಂದು ಮಂಗಳೂರಿಗೆ ಬರುತ್ತಿದ್ದಾರೆ. ಲಕ್ಷ ಜನರನ್ನು ಸೇರಿಸಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ಪ್ರವಾಸ ಮಾಡಲು ನಿಶ್ಚಯಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇವೆ’ ಎಂದು ಅವರು ತಿಳಿಸಿದರು.

‘ಕರ್ನಾಟಕದಲ್ಲಿ ಪಕ್ಷದ ಬೆಳವಣಿಗೆಯಲ್ಲಿ ಯಡಿಯೂರಪ್ಪ ಪಾತ್ರ ಮಹತ್ವದ್ದು. ಅವರ ಮಹತ್ವ ಗುರುತಿಸಿ ಕೇಂದ್ರ ಮಟ್ಟದಲ್ಲಿ ಮಹತ್ವದ ಸ್ಥಾನಮಾನ ನೀಡಲಾಗಿದೆ. ಪಕ್ಷ ಸಂಘಟನೆಗೆ ಯಡಿಯೂರಪ್ಪ ಅವರು ಹೆಚ್ಚಿನ ಸಮಯ ಮೀಸಲಿಡಬೇಕು ಎಂದು ಪ್ರಧಾನಿ ಅವರು ಸೂಚಿಸಿದರು’ ಎಂದು ಮೂಲಗಳು ತಿಳಿಸಿವೆ.‌ಯಡಿಯೂರಪ್ಪ ಅವರು ನಡ್ಡಾ ಅವರನ್ನೂ ಭೇಟಿ ಮಾಡಿ ಸಮಾಲೋಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT