ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ರಾಜ್ಯದ ‘5 ಟಿ’ಸೂತ್ರದ ಬಗ್ಗೆ ಪ್ರಧಾನಿ ಮೆಚ್ಚುಗೆ: ಬೊಮ್ಮಾಯಿ

Last Updated 14 ಜನವರಿ 2022, 6:38 IST
ಅಕ್ಷರ ಗಾತ್ರ

ನವದೆಹಲಿ:‘ಕೋವಿಡ್ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ರಾಜ್ಯದಲ್ಲಿ ಆಮ್ಲಜನಕ ವ್ಯವಸ್ಥೆ ಇರುವ ಹಾಸಿಗೆಗಳು ಮತ್ತು ಆಮ್ಲಜನಕ ಉತ್ಪಾದನಾ ಘಟಕಗಳ ಸಂಖ್ಯೆ ಇನ್ನಷ್ಟು ಹೆಚ್ಚಿಸಲು ಕೇಂದ್ರದ ಸರ್ಕಾರದ ನೆರವು ಕೋರಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನಡೆಸಿದ ವರ್ಚುವಲ್‌ ಸಭೆಯಲ್ಲಿ ಬೊಮ್ಮಾಯಿ ಈ ಕುರಿತು ಪ್ರಸ್ತಾವ ಮಂಡಿಸಿದರು.

ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣ ಮತ್ತು ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್‌, ಟ್ರ್ಯಾಕಿಂಗ್‌, ಟ್ರೇಸಿಂಗ್‌, ಟ್ರಯಾಜಿಂಗ್‌ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರದ ಅಳವಡಿಕೆ, ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸುತ್ತಿರುವುದು ಮತ್ತು ಲಸಿಕೆ ಹಾಕಿಕೊಂಡವರ ಪ್ರಮಾಣದ ದೇಶದ ಸರಾಸರಿಗಿಂತ ಹೆಚ್ಚು ಇರುವ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಕೋವಿಡ್‌ ಮೂರನೇ ಅಲೆ ಫೆಬ್ರುವರಿಯಲ್ಲಿ ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಮೊದಲ ಮತ್ತು ಎರಡನೇ ಅಲೆಯನ್ನು ಎದುರಿಸಿದ ಅನುಭವದ ಆಧಾರದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಅವರು ರಾಜ್ಯಗಳಿಗೆ ಸಲಹೆ ನೀಡಿದರು.

ಮೂರನೇ ಅಲೆಯ ಸಂದರ್ಭ ಶೇ 94 ಕ್ಕೂ ಹೆಚ್ಚು ಸೋಂಕಿತರು ಮನೆಯಗಳಲ್ಲಿಪ್ರತ್ಯೇಕ ವಾಸದಲ್ಲಿ ಇದ್ದಾರೆ. ಆದ್ದರಿಂದ ಅವರಲ್ಲಿ ವಿಶ್ವಾಸ ಮೂಡಿಸುವ ಹಾಗೂ ಅವರಿಗೆ ಔಷಧ ಪೂರೈಕೆಯೂ ಸೇರಿ ಸೂಕ್ತ ಆರೈಕೆ ಖಾತರಿಪಡಿಸಲು ಆದ್ಯತೆ ನೀಡಬೇಕು ಎಂದೂ ಪ್ರಧಾನಿ ಸೂಚಿಸಿದ್ದಾಗಿ ಬೊಮ್ಮಾಯಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT