ಮಂಗಳವಾರ, ಡಿಸೆಂಬರ್ 7, 2021
20 °C

ಮತ್ಸ್ಯ ಉತ್ಪನ್ನಗಳ ರಫ್ತು ಹೆಚ್ಚಳಕ್ಕೆ ಆದ್ಯತೆ: ಕೇಂದ್ರ ಸಚಿವ ಮುರುಗನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮೀನುಗಾರಿಕೆಗೆ ಉತ್ತೇಜನ ನೀಡುವ ಮೂಲಕ ಮೀನುಗಾರರ ಆರ್ಥಿಕ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮತ್ಸ್ಯೋತ್ಪನ್ನಗಳ ರಫ್ತು ಹೆಚ್ಚಳಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಕೇಂದ್ರ ಮೀನುಗಾರಿಕೆ ರಾಜ್ಯ ಸಚಿವ ಮುರುಗನ್ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ‌ ಸರ್ಕಾರ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಆರಂಭಿಸಿದೆ.‌ ಇದರಡಿ ಮೀನುಗಾರಿಕೆ, ಬಂದರು, ಸಂಸ್ಕರಣೆ, ಶೀತಲೀಕರಣ ಘಟಕಗಳ ಅಭಿವೃದ್ಧಿ ಮಾಡುವ ಮೂಲಕ ಮೀನಿನ ಉತ್ಪನ್ನಗಳ‌ ರಫ್ತು ಹೆಚ್ಚಿಸಲಾಗುವುದು ಎಂದರು.

ಸಮುದ್ರ ಕಳೆ‌: ಸಮುದ್ರ ಕಳೆ (ಸೀ ವೀಡ್) ಬೆಳೆಯುವ ಮೂಲಕ ಮೀನುಗಾರ ಮಹಿಳೆಯರಿಗೂ ಆರ್ಥಿಕ ಸ್ವಾವಲಂಬನೆ ನೀಡಲಾಗುವುದು. ಔಷಧಿ, ಆಹಾರ‌ ಸಂಸ್ಕರಣೆ, ರಸಗೊಬ್ಬರಗಳಲ್ಲಿ ಸಮುದ್ರ ಕಳೆ ಬಳಕೆ ಆಗುತ್ತಿದ್ದು, ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.

ಈಗಾಗಲ ಕೊಚ್ಚಿನದ ನಲ್ಲಿ ವಿಶೇಷ ಆರ್ಥಿಕ ವಲಯದಲ್ಲಿ ಸೀವೀಡ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ ಕೆಲಸ‌ ಆರಂಭವಾಗಲಿದೆ ಎಂದರು.

ಇದನ್ನೂ ಓದಿ: 

ದೇಶದಲ್ಲಿ 5 ಆಧುನಿಕ ಮೀನುಗಾರಿಕೆ ಬಂದರು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.‌ ಒಳನಾಡು, ಸಮುದ್ರ ಮೀನುಗಾರಿಕೆ ಅಭಿವೃದ್ಧಿಗೆ‌ ಆದ್ಯತೆ ನೀಡಲಾಗುವುದು ಎಂದರು.

ರಾಜ್ಯದ ಮೀನುಗಾರಿಕೆ‌ ಸಚಿವ ಎಸ್. ಅಂಗಾರ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳ‌ ನೆರವಿನಿಂದ ರಾಜ್ಯದಲ್ಲಿ ಮೀನುಗಾರಿಕೆ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು