ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಆದ್ಯತೆ: ಎಂ.ಬಿ.ಪಾಟೀಲ್‌

Last Updated 25 ಜನವರಿ 2022, 14:00 IST
ಅಕ್ಷರ ಗಾತ್ರ

ವಿಜಯಪುರ: ‘2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 150 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಗುರಿ ಇದ್ದು, ಒಂದು ತಂಡವಾಗಿ ಸಂಘಟಿತ ಹೋರಾಟ ನಡೆಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಲಾಗುವುದು’ ಎಂದು ಕೆಪಿಸಿಸಿ ಪ್ರಚಾರ ಸಮಿತಿಗೆ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಶಾಸಕ ಎಂ.ಬಿ.ಪಾಟೀಲ ಹೇಳಿದರು.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ನನ್ನ ಮೇಲೆ ಭರವಸೆ ಇಟ್ಟು ಪಕ್ಷ ನೀಡಿರುವ ಜವಾಬ್ದಾರಿಯನ್ನು ಗಂಭೀರವಾಗಿ ತೆಗೆದುಕೊಂಡು ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ’ ಎಂದರು.

‘ಈ ಹಿಂದೆ ಸಿದ್ದರಾಮಯ್ಯ ಅವಧಿಯಲ್ಲಿ ರಾಜ್ಯಕ್ಕೆ ಒಳ್ಳೆಯ ಆಡಳಿತ ನೀಡಿದ್ದೇವೆ. ರಾಜ್ಯದ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಿದೆ. ಈ ನಿಟ್ಟಿನಲ್ಲಿ ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನ, ಯುವ ಮುಖಂಡರ ಸಹಕಾರ ಹಾಗೂ ಕಾರ್ಯಕರ್ತರ ಒಗ್ಗಟ್ಟಿನೊಂದಿಗೆ ಚುನಾವಣೆ ಎದುರಿಸಲು ಆದ್ಯತೆ ನೀಡಲಾಗುವುದು‘ ಎಂದರು.

‘ಎದುರಾಳಿ ಪಕ್ಷಗಳ ವೈಫಲ್ಯವನ್ನು ಜನರಿಗೆ ತಿಳಿಸುವ ಮೂಲಕ ಕಾಂಗ್ರೆಸ್‌ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT