ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬುಧವಾರ ಬೆಳಿಗ್ಗೆ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಪ್ರಕರಣವೊಂದರಲ್ಲಿ ಜೈಲು ಸೇರಿರುವ ಸೈಯದ್ ಅಲಿಯಾಸ್ ರಿಯಾಜ್, ಅಜ್ಮತ್ ಉಲ್ಲಾ, ಸೈಯದ್ ಸಮೀರ್, ರಿಯಾಜ್ ಹಾಗೂ ಸೈಯದ್ ಇಮ್ರಾನ್ ಗುಂಪು ಕಟ್ಟಿಕೊಂಡು, ಇನ್ನೊಬ್ಬ ಕೈದಿ ಅಮರ್ ಅಲಿಯಾಸ್ ಅಮರನಾಥ್ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಬಗ್ಗೆ ಕಾರಾಗೃಹದ ಮುಖ್ಯ ಅಧೀಕ್ಷಕ ವಿ. ಶೇಷಮೂರ್ತಿ ದೂರು ನೀಡಿದ್ದು, ಅದರನ್ವಯ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಕ್ಷುಲ್ಲಕ ಕಾರಣಕ್ಕಾಗಿ ಕೈದಿಗಳ ನಡುವೆ ಜಗಳ ಶುರುವಾಗಿ, ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಆರೋಪಿಗಳು ಅಮರ್ ಕಿವಿ ಹಾಗೂ ಕತ್ತಿಗೆ ಬ್ಲೇಡ್ನಿಂದ ಇರಿದಿದ್ದರು. ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳು ಜಾಮೀನು ಮೇಲೆ ಬುಧವಾರ ಸಂಜೆಯೇ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆರೋಪಿಗಳನ್ನು ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು’ ಎಂದೂ ತಿಳಿಸಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.