ಗುರುವಾರ , ಜನವರಿ 21, 2021
30 °C
10 ಸಾವಿರ ಶಾಲೆ ಬಂದ್‌: ಆತಂಕ

ಪ್ರತಿಭಟನೆಗೆ ಖಾಸಗಿ ಶಾಲಾ ಒಕ್ಕೂಟ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್‌ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ನಿಲುವಿನಿಂದ 10 ಸಾವಿರ ಖಾಸಗಿ ಶಾಲೆಗಳು ಬಂದ್ ಆಗುವ ಜೊತೆಗೆ, ಲಕ್ಷಾಂತರ ಶಿಕ್ಷಕರ ಕುಟುಂಬ ಬೀದಿಪಾಲಾಗುವ ಆತಂಕ ಎದುರಾಗಿದೆ’ ಎಂದು ದೂರಿರುವ ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟ (ರುಪ್ಸ), ಶಿಕ್ಷಣ ಇಲಾಖೆಯ ವಿರುದ್ಧ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿದೆ.

‘ಶಿಕ್ಷಣ ಇಲಾಖೆ ನ. 10ರಂದು ಹೊರಡಿಸಿರುವ ಆದೇಶದ ವಿರುದ್ಧ ಹಾಗೂ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಅವರ ಗೊಂದಲದ ಹೇಳಿಕೆಗಳು ಹಾಗೂ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಪ್ರತಿಭಟನೆಯಲ್ಲಿ ಒಂದು ಲಕ್ಷ ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ಭಾಗವಹಿಸಲಿದ್ದಾರೆ’ ಎಂದು ಒಕ್ಕೂಟದ ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ ‘ಪ್ರಜಾವಾಣಿ’ಗೆ ‘ತಿಳಿಸಿದ್ದಾರೆ.

‘ಕೋವಿಡ್ ಸಂಕಷ್ಟದ ಸಮಯದಲ್ಲಿ ಖಾಸಗಿ ಶಾಲೆಗಳಿಗೆ ನೆರವು ನೀಡುವ ಬದಲು, ಎಂಟು ತಿಂಗಳುಗಳಿಂದ ಇಲ್ಲಸಲ್ಲದ ಕಿರುಕುಳ ನೀಡಲಾಗುತ್ತಿದೆ. ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಮಾನ್ಯತೆ ನವೀಕರಣಕ್ಕೆ ಈ ವರ್ಷ ಸಲ್ಲಿಸಿದ್ದ ಸುಮಾರು 5 ಸಾವಿರ ಅರ್ಜಿಗಳನ್ನು ವಿನಾ ಕಾರಣ ತಿರಸ್ಕರಿಸಲಾಗಿದೆ. ಮಕ್ಕಳ ಸುರಕ್ಷತೆಯ ನೆಪದಲ್ಲಿ ಖಾಸಗಿ ಶಾಲೆಗಳನ್ನೇ ಗುರಿಯಾಗಿ ಇಟ್ಟುಕೊಂಡು ಖಾಸಗಿ ಶಾಲೆಗಳನ್ನು ಮುಚ್ಚಿಸುವ ಹುನ್ನಾರ ನಡೆಯುತ್ತಿದೆ’ ಎಂದೂ ಅವರು ದೂರಿದ್ದಾರೆ.

‘ಶಿಕ್ಷಣ ಸಚಿವರು ದಿನಕ್ಕೊಂದು ಗೊಂದಲದ ಹೇಳಿಕೆಗಳನ್ನು ನೀಡುವ ಮೂಲಕ ಖಾಸಗಿ ಶಾಲೆಗಳನ್ನೂ
ಗೊಂದಲಕ್ಕೀಡುತ್ತಿದ್ದಾರೆ. ಇಷ್ಟು ದಿನ ಕರ್ತವ್ಯ ನಿರ್ವಹಿಸಿರುವ ಶಿಕ್ಷಕರ ಕಾಯಕವನ್ನು ಮರೆತು, ನಮ್ಮದೇ ಶಾಲೆಗಳಿಂದ ಸಂಗ್ರಹಿಸಿದ ಹಣದಿಂದ ಪರಿಹಾರ ನೀಡಲು ಮೀನಮೇಷ ಎಣಿಸುತ್ತಿದ್ದಾರೆ. ಇದರಿಂದ ಶಿಕ್ಷಕರು ಮತ್ತು ಅವರ ಕುಟುಂಬಗಳು ಬೀದಿಪಾಲಾಗಿವೆ’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು