ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಾಲೆಗಳಿಂದ ಡಿ.2ರಂದು ಧರಣಿ

ಸರ್ಕಾರದಿಂದ ತಾರತಮ್ಯ ನೀತಿ: ಆರೋಪ
Last Updated 30 ನವೆಂಬರ್ 2020, 21:25 IST
ಅಕ್ಷರ ಗಾತ್ರ

ಬೆಂಗಳೂರು: ಖಾಸಗಿ ಅನುದಾನರಹಿತ ಶಾಲೆಗಳ ಮಾನ್ಯತೆ ನವೀಕರಿಸಲು ಹಿಂದೇಟು ಹಾಕುತ್ತಿರುವ ಸರ್ಕಾರ, ಶಿಕ್ಷಕರಿಗೆ ₹21,400 ವೇತನ ನೀಡಬೇಕು ಎಂದು ಆದೇಶಿಸುವ ಮೂಲಕ ಖಾಸಗಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿರುವ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸ),ಡಿ.2ರಂದು ಧಾರವಾಡ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

‘ಕೋವಿಡ್ ನೆಪವೊಡ್ಡಿ ಶಾಲೆಗಳ ಮಾನ್ಯತೆ ನವೀಕರಿಸಲು ನಿರಾಕರಿಸಲಾಗುತ್ತಿದೆ. ಇದರಿಂದ ಸಾವಿರಾರು ಮಕ್ಕಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಅಲ್ಲದೆ, ಸುಪ್ರೀಂಕೋರ್ಟ್‌ನ ಕೆಲವು ಆದೇಶಗಳನ್ನು ಖಾಸಗಿ ಶಾಲೆಗಳಿಗೆ ಮಾತ್ರ ಅನ್ವಯಿಸಲಾಗುತ್ತಿದೆ. ಸರ್ಕಾರದ ಇಂತಹ ನಿರ್ಧಾರಗಳಿಂದ ಸುಮಾರು 10 ಸಾವಿರ ಶಾಲೆಗಳು, ಲಕ್ಷಾಂತರ ಶಿಕ್ಷಕರು ಬೀದಿ ಪಾಲಾಗಬೇಕಾಗಿದೆ’ ಎಂದು ಸಂಘದ ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬೆಂಬಲ ಇಲ್ಲ: ‘ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಿದ್ದೇವೆ. ಕೆಲವು ಬೇಡಿಕೆ ಈಡೇರಿಸುವ ಭರವಸೆ
ಯನ್ನು ಸರ್ಕಾರ ನೀಡಿದೆ. ರುಪ್ಸ ನಡೆಸುತ್ತಿರುವ ಧರಣಿಗೆ ನಮ್ಮ ಬೆಂಬಲವಿಲ್ಲ’ ಎಂದು ಕರ್ನಾಟಕ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್‌) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT