ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಬಂದ್: ಜನಜೀವನಕ್ಕೆ ತಟ್ಟದ ಬಂದ್‌ ಬಿಸಿ
LIVE

ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬಹುತೇಕ ಸಂಘಟನೆಗಳು ನೈತಿಕ ಬೆಂಬಲ ಘೋಷಿಸಿವೆ. ರಾಜ್ಯದ ಯಾವ್ಯಾವ ಭಾಗದಲ್ಲಿ ಬಂದ್‌ಗೆ ಯಾವ ರೀತಿಯ ಬೆಂಬಲ ವ್ಯಕ್ತವಾಗುತ್ತಿದೆ? ಎಲ್ಲೆಲ್ಲಿ ಪರಿಸ್ಥಿತಿ ಹೇಗಿದೆ ಎಂಬ ಕ್ಷಣಕ್ಷಣದ ಅಪ್‌ಡೇಟ್ಸ್ ಇಲ್ಲಿ ಲಭ್ಯ
Last Updated 5 ಡಿಸೆಂಬರ್ 2020, 13:52 IST
ಅಕ್ಷರ ಗಾತ್ರ
13:5105 Dec 2020

ಚಿತ್ರದುರ್ಗ: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಶನಿವಾರ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಪ್ರತಿಭಟನೆಗೆ ಮಾತ್ರ ಸೀಮಿತವಾಯಿತು. ಜಿಲ್ಲೆಯ ಜನರು ಹೋರಾಟಕ್ಕೆ ಬೆಂಬಲ ನೀಡಲಿಲ್ಲ.

13:5105 Dec 2020

ವಿಜಯಪುರ: ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಹಾಗೂ ನಿಗಮವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಶನಿವಾರ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ವಿಜಯಪುರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಪೂರ್ಣ ವಿಫಲವಾಯಿತು.

13:5005 Dec 2020

ಮಂಡ್ಯ: ಮರಾಠ ಅಭಿವೃದ್ಧಿ ನಿಗಮ ರಚನೆ ಕೈಬಿಡಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

12:1705 Dec 2020

ಕೋಲಾರ: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ನೀಡಿದ್ದ ‘ಕರ್ನಾಟಕ ಬಂದ್‌’ ಕರೆಗೆ ಜಿಲ್ಲೆಯಲ್ಲಿ ಶನಿವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ಜನಜೀವನಕ್ಕೆ ಬಂದ್‌ನ ಬಿಸಿ ತಟ್ಟಲಿಲ್ಲ.

11:5305 Dec 2020

ಕಾರವಾರ: ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿ ಜನಜೀವನ ಎಂದಿನಂತೆ ಸಾಗಿತು.

11:3705 Dec 2020

ಚಾಮರಾಜನಗರ: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ಖಂಡಿಸಿ ಕನ್ನಡ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲೆಯ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಿ, ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದವು.

11:0005 Dec 2020

ರಾಮನಗರ: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಶನಿವಾರ ಕನ್ನಡಪರ ಸಂಘಟನೆಗಳ ಒಕ್ಕೂಟವು ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ವಿವಿಧ ಸಂಘಟನೆಗಳು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿದವು.

07:2705 Dec 2020

ಉಡುಪಿಯಲ್ಲಿ ಬಂದ್ ನೀರಸ

ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್‌ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಎಂದಿನಂತೆ ಇದೆ.

07:1505 Dec 2020
06:3005 Dec 2020