ಶುಕ್ರವಾರ, ಏಪ್ರಿಲ್ 16, 2021
23 °C

ಜಿ.ಎಸ್.ಸಿದ್ಧಲಿಂಗಯ್ಯ ಅವರಿಗೆ 'ಶ್ರೀ ಸಾಹಿತ್ಯ ಪ್ರಶಸ್ತಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಈ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’ಗೆ ಕವಿ ಮತ್ತು ವಿಮರ್ಶಕ ಪ್ರೊ.ಜಿ.ಎಸ್.ಸಿದ್ಧಲಿಂಗಯ್ಯ ಅವರು ಆಯ್ಕೆಯಾಗಿದ್ದಾರೆ.

ಎಸ್.ಜಿ.ಸಿದ್ಧರಾಮಯ್ಯ, ಎಂ.ಎ.ಜಯಚಂದ್ರ ಹಾಗೂ ಶಿವರಾಮಶೆಟ್ಟಿ ಅವರಿದ್ದ ಆಯ್ಕೆ ಸಮಿತಿಯು ಸರ್ವಾನುಮತದಿಂದ ಪ್ರಶಸ್ತಿಗೆ ಆಯ್ಕೆ ಮಾಡಿದೆ.

‘ಪ್ರಶಸ್ತಿ ಒಂದು ಲಕ್ಷ ನಗದು, ಸ್ಮರಣಿಕೆ ಒಳಗೊಂಡಿವೆ. ಜನವರಿ 10ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಪ್ರತಿಷ್ಠಾನದ ಅಧ್ಯಕ್ಷ ಆರ್‌.ಲಕ್ಷ್ಮೀನಾರಾಯಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು