ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃತ್ತಿಪರ ಕೋರ್ಸು : ಜುಲೈ 7, 8 ರಂದು ಸಿಇಟಿ: ಅಶ್ವತ್ಥನಾರಾಯಣ

Last Updated 20 ಫೆಬ್ರುವರಿ 2021, 13:26 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದೆ.

7ರಂದು ಬೆಳಿಗ್ಗೆ ಜೀವವಿಜ್ಞಾನ, ಮಧ್ಯಾಹ್ನ ಗಣಿತ, 8ರಂದು ಬೆಳಿಗ್ಗೆ ಭೌತ ವಿಜ್ಞಾನ, ಮಧ್ಯಾಹ್ನ ರಸಾಯನವಿಜ್ಞಾನ, 9ರಂದು ಬೆಳಗ್ಗೆ ಕನ್ನಡ (ಬೆಂಗಳೂರಿನಲ್ಲಿ ಮಾತ್ರ) ಪರೀಕ್ಷೆ ನಡೆಯಲಿದೆ ಪರೀಕ್ಷೆಯ ಅವಧಿ ಬೆಳಿಗ್ಗೆ 10.30ರಿಂದ 11.50, ಮಧ್ಯಾಹ್ನ 2.30ರಿಂದ 3.50. ಕನ್ನಡ ಪರೀಕ್ಷೆ 11.30ರಿಂದ 12.30ರವರೆಗೆ ನಡೆಯಲಿದೆ.

ಶನಿವಾರ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ‘ಕನ್ನಡ ಪರೀಕ್ಷೆಯನ್ನು ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳು ಬರೆಯಲಿದ್ದಾರೆ’ ಎಂದರು.

ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ಪಶುವೈದ್ಯ, ಯೋಗ ಮತ್ತು ನ್ಯಾಚುರೋಪಥಿ, ಬಿ ಫಾರ್ಮ, ಫಾರ್ಮ-ಡಿ ಸೇರಿ ಇನ್ನಿತರೆ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಿದೆ. ಆಯೋಜಿಸಿದೆ.

ರಾಜ್ಯದಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ, ಸಿಬಿಎಸ್‌ಸಿ 12ನೇ ತರಗತಿ ಪರೀಕ್ಷೆ ಹಾಗೂ ಇತರೆ ರಾಜ್ಯಗಳ ಸಿಇಟಿ ಪರೀಕ್ಷೆಗಳ ವೇಳಾಪಟ್ಟಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರಾಜ್ಯದ ಸಿಇಟಿ ವೇಳಾಪಟ್ಟಿನು ಸಿದ್ಧಪಡಿಸಲಾಗಿದೆ ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ರಾಜ್ಯದ ದ್ವಿತೀಯ ಪಿಯಸಿ ಪರೀಕ್ಷೆ ಮೇ 24ರಿಂದ ಜೂನ್‌ 10ರವರೆಗೆ, ಸಿಬಿಎಸ್‌ಸಿ 12ರ ತರಗತಿ ಪರೀಕ್ಷೆ ಮೇ 4ರಿಂದ ಜೂನ್‌ 2ರವರೆಗೆ, ಪಶ್ಚಿಮ ಬಂಗಾಳದ ಸಿಇಟಿ ಜುಲೈ 11ರಂದು, ಜೆಇಇ (ಮೇನ್)‌ ಫೆಬ್ರವರಿ 23ರಿಂದ ಮೇ 28ರವರೆಗೆ, ನೀಟ್‌ ಪರೀಕ್ಷೆ ಜುಲೈನಲ್ಲಿ, ಜೆಇಇ (ಅಡ್ವಾನ್ಸ್)‌ ಜುಲೈ 3, ಗೋವಾ ಸಿಇಟಿ ಮೇ ನಾಲ್ಕನೇ ವಾರದಲ್ಲಿ, ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಜೂನ್‌ 14ರಿಂದ ಜೂನ್‌ 25ರವರೆಗೆ ನಡೆಯಲಿದೆ. ಈ ಎಲ್ಲ ವೇಳಾಪಟ್ಟಿಗಳನ್ನು ಗಣನೆಗೆ ತೆಗೆದುಕೊಂಡು ರಾಜ್ಯದ ಸಿಇಟಿ ಪರೀಕ್ಷೆ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ ಎಂದೂ ಉಪ ಮುಖ್ಯಮಂತ್ರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT