ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಣ್ಣ–ಮಧ್ಯಮ ರೈತರಿಂದ ಲಾಭದಾಯಕ ಕೃಷಿ: ಶೋಭಾ ಕರಂದ್ಲಾಜೆ

Last Updated 20 ಆಗಸ್ಟ್ 2021, 20:32 IST
ಅಕ್ಷರ ಗಾತ್ರ

ಬೆಂಗಳೂರು: ‘ಸಣ್ಣ ಮತ್ತು ಮಧ್ಯಮ ರೈತರನ್ನು ಒಗ್ಗೂಡಿಸಿ ಕೃಷಿ ಕ್ಷೇತ್ರವನ್ನು ಲಾಭದಾಯಕ ಕ್ಷೇತ್ರವಾಗಿ ಮಾರ್ಪಡಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಶೇ 70ರಷ್ಟು ಜನ ಕೃಷಿಕರು. ಇವರಲ್ಲಿ ಶೇ 80ರಷ್ಟು ಕೃಷಿಕರು ಸಣ್ಣ, ಮಧ್ಯಮ ಹಿಡುವಳಿದಾರರು. ಇವರು ಲಾಭದಾಯಕವಲ್ಲ ಎಂದು ಕೃಷಿ ಮಾಡುತ್ತಿಲ್ಲ. ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇವರನ್ನು ಒಗ್ಗೂಡಿಸಿ ಕೃಷಿಯನ್ನು ಲಾಭದಾಯಕಗೊಳಿಸುವುದು ಉದ್ದೇಶ’ ಎಂದು ಹೇಳಿದರು.

ಕಾಂಗ್ರೆಸ್‌ ಆಡಳಿತದಲ್ಲಿ ಅಕ್ಕಿ, ಗೋಧಿಗಾಗಿ ಬೇರೆ ದೇಶಗಳತ್ತ ನೋಡುತ್ತಿದ್ದ ದೇಶ ಈಗ ಆಹಾರ ಉತ್ಪಾದನೆ
ಯಲ್ಲಿ ಸ್ವಾವಲಂಬಿ ಆಗಿದೆ. ಇದು ಪ್ರಧಾನಿಯವರ ದೂರದೃಷ್ಟಿಯ ಯೋಜನೆಗಳ ಫಲ. ಈ ಬಾರಿ 3.05 ಕೋಟಿ ಮೆಟ್ರಿಕ್‌ ಟನ್‌ ಆಹಾರ ಉತ್ಪಾದನೆ ಮತ್ತು 3.26 ಕೋಟಿ ಮೆಟ್ರಿಕ್‌ ಟನ್ ತೋಟಗಾರಿಕೆ ಬೆಳೆ ಉತ್ಪಾದನೆ ಆಗಿದೆ ಎಂದರು.

‘ಆಹಾರ ಪದಾರ್ಥ ರಫ್ತಿನಲ್ಲೂ ನಾವೀಗ 9 ನೇ ಸ್ಥಾನದಲ್ಲಿದ್ದೇವೆ. ಕಾಂಗ್ರೆಸ್ ಆಡಳಿತದಲ್ಲಿ ಕೃಷಿ ಮೂಲದ ಜಿಡಿಪಿ ಕೇವಲ ಶೇ 13 ರಿಂದ 14 ಇತ್ತು. ಬಿಜೆಪಿಯ ಆಡಳಿತ ಅವಧಿಯಲ್ಲಿ ಅದು ಶೇ 20.22 ಕ್ಕೆ ಏರಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT