ಸಾಹಿತಿ ಚಂದ್ರಶೇಖರ ಕಂಬಾರ ಪತ್ನಿ ಸತ್ಯಭಾಮ ಕಂಬಾರ ನಿಧನ
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ (76) ಅವರು ಮಂಗಳವಾರ ಬೆಳಿಗ್ಗೆ ನಿಧನರಾದರು.
ಅವರು ಹೃದಯ ಸಂಬಂಧಿ ಅನಾರೋಗ್ಯಕ್ಕೀಡಾಗಿದ್ದರು. ಜಯದೇವ ಹೃದ್ರೋಗ ಆಸ್ಪತ್ರೆಗೆ ಇದೇ 3ರಂದು ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬೆಳಿಗ್ಗೆ 6.15ಕ್ಕೆ ಕೊನೆಯುಸಿರೆಳೆದಿದ್ದಾರೆ.
ಕತ್ರಿಗುಪ್ಪೆಯಲ್ಲಿರುವ ಅವರ ನಿವಾಸ ಸಿರಿ ಸಂಪಿಗೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.