ಶುಕ್ರವಾರ, ಅಕ್ಟೋಬರ್ 23, 2020
21 °C

ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ವಿರೋಧ: ಹೋರಾಟಕ್ಕೆ ಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪದವಿಪೂರ್ವ ಪರೀಕ್ಷಾ ಮಂಡಳಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯೊಂದಿಗೆ ವಿಲೀನಗೊಳಿಸುವುದನ್ನು ವಿರೋಧಿಸಿ ಹೋರಾಟಕ್ಕಿಳಿಯಲು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರು, ಪ್ರಾಂಶುಪಾಲರು ಹಾಗೂ ಬೋಧಕೇತರ ಸಿಬ್ಬಂದಿ ಒಳಗೊಂಡ ಜಂಟಿ ಕ್ರಿಯಾ ಸಮಿತಿ ರಚಿಸಲಾಗಿದೆ.

ಈ ವಿಲೀನ ಪ್ರಸ್ತಾವ ಹಿಂದಿನ ಕಾಂಗ್ರೆಸ್ ಸರ್ಕಾರದಿಂದಲೇ ಇತ್ತು. ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಅವರು ಕೆಲವು ತಿಂಗಳ ಹಿಂದೆ ಈ ಬಗ್ಗೆ ಮುಖ್ಯಮಂತ್ರಿ ಜೊತೆ ವಿಷಯ ಪ್ರಸ್ತಾಪಿಸಿದ್ದರು. ಆದರೆ, ಈ ಸಂಬಂಧ ಯಾವುದೇ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ.

ಪಿಯು ಮಂಡಳಿ ವಿಲೀನಕ್ಕೆ ಪಿಯು ಉಪನ್ಯಾಸಕರು, ಬೋಧಕೇತರರು ಹಾಗೂ ಪ್ರಾಂಶುಪಾಲರು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಡಳಿಯನ್ನು ಪ್ರತ್ಯೇಕವಾಗಿಯೇ ಉಳಿಸಿಕೊಳ್ಳುವ ಕುರಿತು ಶಾಸಕರ ಭವನದಲ್ಲಿ ಭಾನುವಾರ ಸಭೆ ಸೇರಿ, ಹೋರಾಟಕ್ಕ ಸಮಿತಿ ರಚನೆ ಮಾಡಿದೆ.

‘ಉಪನ್ಯಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಈ ರೀತಿಯ ವಿಲೀನ ಸರಿಯಲ್ಲ. ಈ ಸಂಬಂಧ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಿದ್ದೇವೆ. ಪ್ರಸ್ತಾವವನ್ನು ಇಲಾಖೆ ಕೈಬಿಡದಿದ್ದರೆ ಹೋರಾಟ ನಡೆಸಲಿದ್ದೇವೆ. ಪ್ರಾಂಶುಪಾಲರ ಸಂಘದ ಗೌರವಾಧ್ಯಕ್ಷ ಕೆ.ಟಿ. ಶ್ರೀಕಂಠೇಗೌಡ, ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ, ಬೋಧಕತೇರ ಸಂಘದ ಅಧ್ಯಕ್ಷ ನಂದೀಶ್ ಸೇರಿದಂತೆ ಸುಮಾರು 50 ಮಂದಿ ಪದಾಧಿಕಾರಿಗಳು ಚರ್ಚೆ ಮಾಡಿ, ಜಂಟಿ ಕ್ರಿಯಾ ಸಮಿತಿ ರಚಿಸಿದ್ದೇವೆ. ಈ ಸಮಿತಿಯ ಮೂಲಕವೇ ಹೋರಾಟ ಮಾಡಲಿದ್ದೇವೆ’ ಎಂದು ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್. ನಿಂಗೇಗೌಡ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು