ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಸಂಘಟನೆಗಳ ಕಾರ್ಯಕರ್ತರಿಂದ ಬೆಳಗಾವಿಯಲ್ಲಿ ಪ್ರತಿಭಟನೆ

Last Updated 5 ಡಿಸೆಂಬರ್ 2022, 5:58 IST
ಅಕ್ಷರ ಗಾತ್ರ

ಬೆಳಗಾವಿ: ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ್‌ ದೇಸಾಯಿ ಹಾಗೂ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆ ಡಿ.6ರಂದು ಬೆಳಗಾವಿಗೆ ಆಗಮಿಸುತ್ತಿರುವುದಕ್ಕೆ ಕನ್ನಡ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ಮಹಾರಾಷ್ಟ್ರ ಸಚಿವರ ನಡೆ ಖಂಡಿಸಿ ಸೋಮವಾರ ಪ್ರತಿಭಟನೆ ನಡೆಸಲು, ಬೆಂಗಳೂರಿನಿಂದ ವಿವಿಧ ಕನ್ನಡ ಸಂಘಟನೆಗಳು ಬೆಳಗಾವಿಯತ್ತ ಮುಖಮಾಡಿವೆ.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಸಮಾವೇಶಗೊಳ್ಳುತ್ತಿರುವ ಕಾರ್ಯಕರ್ತರು, ಮಹಾರಾಷ್ಟ್ರದ ನಾಯಕರ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ.

‘ಮಹಾರಾಷ್ಟ್ರ ನಾಯಕರಿಗೆ ಬೆಳಗಾವಿ ಪ್ರವೇಶಿಸಲು ನಿರ್ಬಂಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು’ ಎಂದು ಕಾರ್ಯಕರ್ತರು ಒತ್ತಾಯಿಸಿದರು. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ‘ಪ್ರಾಣ ಕೊಡ್ತೇವೆ. ಬೆಳಗಾವಿ ಮಹಾರಾಷ್ಟ್ರಕ್ಕೆ ಹೋಗಲು ಬಿಡೆವು’ ಎಂದು ಘೋಷಣೆ ಕೂಗಿದರು.

ಇಲ್ಲಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಲಿದ್ದಾರೆ. ಅವರ ಹೋರಾಟಕ್ಕೆ ಬೆಳಗಾವಿಯ ಕನ್ನಡ ಸಂಘಟನೆಗಳು ಬೆಂಬಲ ಸೂಚಿಸಿವೆ. ಸೋಮವಾರ ತಡರಾತ್ರಿ ವೇಳೆಗೆ, ಕನ್ನಡ ಸಂಘಟನೆಗಳ ಇನ್ನಷ್ಟು ಕಾರ್ಯಕರ್ತರು ಬೆಳಗಾವಿಗೆ ಆಗಮಿಸುವ ನಿರೀಕ್ಷೆಯಿದೆ.

ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಪ್ರಮುಖ ಮಾರ್ಗಗಳಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕಾಗಿ ಬ್ಯಾರಿಕೇಡ್‌ ಅಳವಡಿಸಿದ್ದಾರೆ. ವಾಹನ ಸವಾರರ ತಪಾಸಣೆಯನ್ನೂ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT