ಇದೇ 16ಕ್ಕೆ ಖಾಸಗಿ ಶಾಲೆಗಳ ಒಕ್ಕೂಟದ ಪ್ರತಿಭಟನೆ
ಬೆಂಗಳೂರು: ಖಾಸಗಿ ಶಾಲಾ ಶಿಕ್ಷಕರ ಮತ್ತು ಆಡಳಿತ ಮಂಡಳಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಒಕ್ಕೂಟ (ಕ್ಯಾಮ್ಸ್) ಇದೇ 16ರಂದು ‘ನಮ್ಮ ನಡೆ ಶಿಕ್ಷಕರ ಕಡೆ, ಶಿಕ್ಷಣ ಸಂಸ್ಥೆಗಳು- ಶಿಕ್ಷಕರು ಉಳಿದರೆ ಶಿಕ್ಷಣ’ ಎಂಬ ಘೋಷಣೆಯಡಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿದೆ.
‘ಅಂದು ಬೆಳಿಗ್ಗೆ 10 ಗಂಟೆಗೆ ಮೌರ್ಯ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಲಾಗುವುದು’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ತಿಳಿಸಿದ್ದಾರೆ.
‘ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಯನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ, ಮೊದಲ ಹಂತದಲ್ಲಿಯೇ ಕೋವಿಡ್ ಲಸಿಕೆ ನೀಡಬೇಕು. ಆಹಾರ ಕಿಟ್, ಗೌರವಧನ ವಿತರಿಸಬೇಕು, ಪ್ರತ್ಯೇಕ ವಿಮೆ ಸೌಲಭ್ಯ ನೀಡಬೇಕು. ಶಿಕ್ಷಣ ಸಂಸ್ಥೆಗಳ ಮರು ಆರಂಭ, ದಾಖಲಾತಿ, ಹಾಜರಾಗಿ, ಕನಿಷ್ಠ ಮೌಲ್ಯಮಾಪನದ ತೇರ್ಗಡೆ, ಬಾಕಿ ಹಾಗೂ ಪ್ರಸ್ತುತ ಕನಿಷ್ಠ ಶುಲ್ಕವನ್ನು ಪಾವತಿಸುವ ಬಗ್ಗೆ ಸ್ಪಷ್ಟೀಕರಣ ಆದೇಶ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದೇವೆ. ರಾಜ್ಯದ ಶೇ 95ರಷ್ಟು ಖಾಸಗಿ ಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿವೆ. ಈ ಬಗ್ಗೆ ಹಲವು ಬಾರಿ ಸರ್ಕಾರಕ್ಕೆ ಮನವಿ ಮನವಿ ಸಲ್ಲಿಸಿದ್ದರೂ ಯಾವುದೇ ಸಿಕ್ಕಿಲ್ಲ. ಹೀಗಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ’ ಎಂದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.