ಬುಧವಾರ, ನವೆಂಬರ್ 25, 2020
18 °C

ಭಿಕ್ಷೆ ‌ಬೇಡಿ ರೈತರಿಂದ ಪ್ರತಿಭಟನೆ: ₹ 5,470 ಸರ್ಕಾರಕ್ಕೆ ಜಮಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಬೆಳೆ ವಿಮೆ ಪಾವತಿ ವಿಳಂಬ ಹಾಗೂ ಮಳೆಯಿಂದ ಆದ ಹಾನಿಗೆ ರಾಜ್ಯ ಸರ್ಕಾರ ಈವರೆಗೂ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು‌ ಶುಕ್ರವಾರ ನಗರದ ಸಾರ್ವಜನಿಕ ಪ್ರದೇಶಗಳಲ್ಲಿ ಜನರಿಂದ ಭಿಕ್ಷೆ ‌ಬೇಡಿದರು.

ಹೀಗೆ ಸಂಗ್ರಹವಾದ ₹ 5,470 ಅನ್ನು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ನೀಡಿ, ವಿನೂತನ ಪ್ರತಿಭಟನೆ ನಡೆಸಿದರು.

ರೈತ ಸಂಘದ ರಾಜ್ಯ ಘಟಕದ ಗೌರವಾಧ್ಯಕ್ಷ ಚಾಮರಸ ಮಾಲಿ‌ಪಾಟೀಲ ಮಾತನಾಡಿ, ‘ಮೂರು ವರ್ಷಗಳಿಂದ ರೈತರು ಬರದಿಂದ ಹಾಗೂ
ಈ ವರ್ಷ ಅತಿವೃಷ್ಟಿಯಿಂದ ಸಮಸ್ಯೆಯಲ್ಲಿದ್ದಾರೆ. ಬೆಳೆ‌ ಹಾನಿಗೆ ಈವರೆಗೂ ಪರಿಹಾರ ನೀಡಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಿವಾಳಿಯಾಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರಾದ ಅಮರಣ್ಣ ಗುಡಿಹಾಳ, ಜಿಲ್ಲಾಧ್ಯಕ್ಷ ಸುಗೂರಯ್ಯ ಸ್ವಾಮಿ‌ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.