ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಎಲ್ಲಾ ಅಂಗನವಾಡಿಗಳಿಗೆ ವಿದ್ಯುತ್‌, ಫ್ಯಾನ್ ಒದಗಿಸಿ: ಹೈಕೋರ್ಟ್‌

Last Updated 20 ಏಪ್ರಿಲ್ 2021, 0:56 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲಾ 65,911 ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಮತ್ತು ಫ್ಯಾನ್‌ಗಳನ್ನು ಒದಗಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

33,164 ಅಂಗನವಾಡಿಗಳಿಗೆ ಮಾತ್ರ ವಿದ್ಯುತ್ ಸಂಪರ್ಕ, 26,560 ಅಂಗನವಾಡಿಗಳಿಗೆ ಫ್ಯಾನ್‌ಗಳನ್ನು ಪೂರೈಸಲಾಗಿದೆ. 44,225 ಕೇಂದ್ರಗಳಲ್ಲಿ ಶೌಚಾಲಯ ಇದೆ ಎಂದು ಸರ್ಕಾರ ಮೆಮೊ ಸಲ್ಲಿಸಿತ್ತು.

ಇದನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಈ ಅಂಕಿ–ಅಂಶಗಳು ಆಘಾತಕಾರಿ ಸ್ಥಿತಿಯನ್ನು ಚಿತ್ರಿಸುತ್ತವೆ’ ಎಂದು ಅಭಿಪ್ರಾಯಪಟ್ಟಿತು.

‘ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ಇರಬೇಕು. ಬಾಲಕರು, ಬಾಲಕಿಯರು ಮತ್ತು ಅಂಗವಿಕಲ ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಬೇಕು. ಈ ಶಿಫಾರಸನ್ನು ಸರ್ಕಾರ ಗಮನಿಸಬೇಕು’ ಎಂದು ಪೀಠ ಹೇಳಿತು.

‘ಕೊಳೆಗೇರಿಗಳಿಗೆ 100 ಮತ್ತು ನಗರ ಪ್ರದೇಶಕ್ಕೆ 350 ಅಂಗನವಾಡಿಗಳನ್ನು ಮಂಜೂರು ಮಾಡಲಾಗಿದೆ. ಹೆಚ್ಚುವರಿಯಾಗಿ ಇನ್ನೂ 4,244 ಅಂಗನವಾಡಿಗಳಿಗೆ ಬೇಡಿಕೆ ಇದೆ. ಸ್ವಚ್ಛ ಭಾರತ ಯೋಜನೆಯಡಿ 3,219 ಶೌಚಾಲಯಗಳನ್ನು ನಿರ್ಮಿಸಲಾಗಿದೆ’ ಎಂದು ಸರ್ಕಾರ ವಿವರಣೆ ಸಲ್ಲಿಸಿತು.

‘ಕೊಳೆಗೇರಿ ಮತ್ತು ಎಸ್‌ಸಿ/ಎಸ್‌ಟಿ ಜನಸಂಖ್ಯೆ ಹೆಚ್ಚಿರುವ ಅಂಗನವಾಡಿಗಳಲ್ಲಿ ಕುಡಿಯಲು ಶುದ್ಧ ಮತ್ತು ಬಿಸಿನೀರು ಪೂರೈಸಬೇಕು ಎಂಬ ಶಿಫಾರಸನ್ನು ಸರ್ಕಾರ ಪಾಲಿಸಿಲ್ಲ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.

ಬೆಂಗಳೂರು ನಗರದಲ್ಲಿ ಹೆಚ್ಚಿನ ಸಂಖ್ಯೆಯ ಅಂಗವಾಡಿಗಳನ್ನು ತೆರೆಯ ಬೇಕು. ಈ ಎಲ್ಲಾ ನಿರ್ದೇಶನಗಳನ್ನು ಪಾಲಿಸಿರುವ ಸಂಬಂಧ ಅನುಸರಣಾ ಅಫಿಡವಿಟ್‌ ಸಲ್ಲಿಸುವಂತೆ ತಿಳಿಸಿದ ಪೀಠ, ವಿಚಾರಣೆಯನ್ನು ಜೂ.11ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT