ಗುರುವಾರ , ನವೆಂಬರ್ 26, 2020
22 °C

ಕೆಇಎ: ದಾಖಲೆ ಸರಿಪಡಿಸಲು ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ದಾಖಲೆಗಳನ್ನು  ಸರಿಪಡಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮತ್ತೊಂದು ಅವಕಾಶ ನೀಡಿದೆ.

‘ಸಾಮಾನ್ಯ ವರ್ಗದ ಅಡಿಯಲ್ಲಿ ಅರ್ಜಿ ಸಲ್ಲಿಸಿ, ದಾಖಲೆಗಳ ಪರಿಶೀಲನೆಯಾಗಿರುವ ವಿದ್ಯಾರ್ಥಿಗಳ ಪೋಷಕರ ಕುಟುಂಬದ ವಾರ್ಷಿಕ ಆದಾಯ ₹8 ಲಕ್ಷಕ್ಕಿಂತ ಕಡಿಮೆ ಇದ್ದಲ್ಲಿ ಅಂತಹ ಅಭ್ಯರ್ಥಿಗಳು ಮಾತ್ರ ತಮ್ಮ ಆದಾಯ ಪ್ರಮಾಣ ಪತ್ರವನ್ನು ಅಪ್‌ಲೋಡ್‌ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅ.27 ಕೊನೆಯ ದಿನ’ ಎಂದು ಕೆಇಎ ಹೇಳಿದೆ.

‘ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಕೆಲವರು ಆದಾಯ ಪ್ರಮಾಣ ಪತ್ರ ಅಪ್‌ಲೋಡ್‌ ಮಾಡಿದ್ದಾರೆ. ಕೆಲವರು ಮಾಡಿಲ್ಲ. ಆದರೆ, ₹8 ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರುವ ಕುಟುಂಬದ ಯಾವುದೇ ವರ್ಗದ ಅಭ್ಯರ್ಥಿ ಆದಾಯ ಪ್ರಮಾಣ ಪತ್ರ ಲಗತ್ತಿಸುವುದು ಕಡ್ಡಾಯ. ಈ ವಿದ್ಯಾರ್ಥಿಗಳು ಸಂಖ್ಯಾಧಿಕ ಕೋಟಾ ಅಡಿ (ಸೂಪರ್‌ ನ್ಯೂಮರರಿ ಕೋಟಾ) ಆಯ್ಕೆಯಾದರೆ, ಶುಲ್ಕ ಕಡಿಮೆ ಆಗುತ್ತದೆ’ ಎಂದು ಪ್ರಾಧಿಕಾರದ ಅಧಿಕಾರಿಯೊಬ್ಬರು ಹೇಳಿದರು. 

ಇದಲ್ಲದೆ, ಅರ್ಜಿಯಲ್ಲಿ ಯಾವುದೇ ಮೀಸಲಾತಿ ಕೋರಿದ್ದಲ್ಲಿ ಮಾತ್ರ, ಅಂತಹ ವಿದ್ಯಾರ್ಥಿಗಳು ಮೀಸಲಾತಿಗೆ ಸಂಬಂಧಿಸಿದಂತೆ ದಾಖಲೆ/ಪ್ರಮಾಣ ಪತ್ರಗಳನ್ನು ಮತ್ತೊಮ್ಮೆ ಅಪ್‌ಲೋಡ್‌ ಮಾಡಲು ಅವಕಾಶ ನೀಡಲಾಗಿದೆ. ಮೀಸಲಾತಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸದೇ ಇದ್ದಲ್ಲಿ ಸಂಬಂಧಿಸಿದ ಮೀಸಲಾತಿಗೆ ಮಾತ್ರ ಪರಿಗಣಿಸುವುದಿಲ್ಲ ಎಂದು ಕೆಇಎ ಹೇಳಿದೆ.

ಮಾಹಿತಿಗೆ, ಪ್ರಾಧಿಕಾರದ ದೂರವಾಣಿ– 080–2356 4583 ಅಥವಾ ವೆಬ್‌ಸೈಟ್ http://kea.kar.nic.in ಸಂಪರ್ಕಿಸಬಹುದು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು