ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹40 ಸಾವಿರ ಲಂಚ ಪಡೆಯುತ್ತಿದ್ದಾಗ ಪಿಎಸ್‌ಐ, ಕಾನ್‌ಸ್ಟೆಬಲ್‌ ಬಂಧನ

ಮನೆ ಬಾಡಿಗೆ ವಸೂಲಿ ಮಾಡಿಕೊಡಲು ₹40 ಸಾವಿರ ಪಡೆಯುತ್ತಿದ್ದಾಗ ಸೆರೆ
Last Updated 21 ಮಾರ್ಚ್ 2023, 19:30 IST
ಅಕ್ಷರ ಗಾತ್ರ

ರಾಣೆಬೆನ್ನೂರು: ವ್ಯಕ್ತಿಯೊಬ್ಬರಿಂದ ಮನೆ ಬಾಡಿಗೆ ವಸೂಲಿ ಮಾಡಿಕೊಡಲು ₹ 40 ಸಾವಿರ ಲಂಚ ಪಡೆಯುತ್ತಿದ್ದಾಗ ಇಲ್ಲಿನ ಅಶೋಕನಗರ ಠಾಣೆ ಪಿಎಸ್‌ಐ ಮತ್ತು ಕಾನ್‌ಸ್ಟೆಬಲ್‌ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಪಿಎಸ್‌ಐ ಸುನೀಲ ತೇಲಿ, ವಾಹನ ಚಾಲಕ ಹಾಗೂ ಕಾನ್‌ಸ್ಟೆಬಲ್‌ ಸಚಿನ್‌ ಓಲೇಕಾರ ಸಿಕ್ಕಿಬಿದ್ದವರು. ಇವರ ಜೊತೆಗೆ ಉಡುಪಿ ಟಿಸ್ಟಾಲ್‌ ಮಾಲೀಕ ಸಂತೋಷ್‌ ಶೆಟ್ಟಿ ಅವರನ್ನು ಲೋಕಾಯುಕ್ತ ಬಂಧಿಸಿದ್ದು, ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

ದೂರುದಾರ ಸಿದ್ಧೇಶ್ವರ ನಗರದ ಅಫ್ರೋಜ್‌ ಅಹ್ಮದ್‌ ನೂರ ಅಹ್ಮದ್‌ಸಾಬ್‌ ಊದಗಟ್ಟಿ ಅವರಿಗೆ ಅಣ್ಣನ ಪತ್ನಿ ರೌನಕ್‌ ಖಾನ್‌ ಅವರೊಂದಿಗೆ ಮನೆ ಬಾಡಿಗೆ ವಿಚಾರದಲ್ಲಿ ವಿವಾದವಿತ್ತು. ರೌನಕ್‌ ರಾಣೆಬೆನ್ನೂರು ಠಾಣೆಯಲ್ಲಿ ದೂರು ನೀಡಿದ್ದರು.

ಈ ದೂರು ಹಿಂಪಡೆಯಲು ಪಿಎಸ್‌ಐ ಹಾಗೂ ಕಾನ್‌ಸ್ಟೆಬಲ್‌ ₹ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ₹ 40 ಸಾವಿರ ಹಣ ಕೊಡಲು ಒಪ್ಪಿಕೊಂಡು ಲಂಚದ ಹಣವನ್ನು ಆರೋಪಿ ಪರವಾಗಿ ಟಿ ಸ್ಟಾಲ್‌ ಮಾಲೀಕನ ಮೂಲಕ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT