ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ: ಎಡಿಜಿಪಿ, ಡಿವೈಎಸ್ಪಿ ಮನೆಗಳ ಮೇಲೆ ಇ.ಡಿ ದಾಳಿ

Last Updated 10 ನವೆಂಬರ್ 2022, 19:32 IST
ಅಕ್ಷರ ಗಾತ್ರ

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಾದ ಅಮ್ರಿತ್ ಪೌಲ್ ಹಾಗೂ ಶಾಂತಕುಮಾರ್ ಮನೆ ಸೇರಿದಂತೆ 11 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ದಾಳಿ ಮಾಡಿ, ಶೋಧ ನಡೆಸಿದರು.

‘ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮ್ರಿತ್ ಪೌಲ್ ಹಾಗೂ ಡಿವೈಎಸ್ಪಿ ಶಾಂತಕುಮಾರ್, ವಿಭಾಗದ ಸಿಬ್ಬಂದಿ ಮೂಲಕ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು. ಅಭ್ಯರ್ಥಿಗಳ ಒಎಂಆರ್ ಪ್ರತಿ ತಿದ್ದಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೆಸರು ಬರುವಂತೆ ನೋಡಿಕೊಂಡಿದ್ದರು’ ಎಂಬುದು ಸಿಐಡಿ ಅಧಿಕಾರಿಗಳ ತನಿಖೆಯಿಂದ ಪತ್ತೆಯಾಗಿತ್ತು.

ವಿಭಾಗದ ಸಿಬ್ಬಂದಿ ಮನೆ ಮೇಲೆ ದಾಳಿ ಮಾಡಿದ್ದ ಸಿಐಡಿ ಅಧಿಕಾರಿಗಳು, ₹ 2.50 ಕೋಟಿ ಜಪ್ತಿ ಮಾಡಿದ್ದರು. ಆರೋಪಿಗಳ ಅಕ್ರಮ ಹಣ ವರ್ಗಾವಣೆ ಬಗ್ಗೆ ಮಾಹಿತಿ ಪಡೆದಿದ್ದ ಇ.ಡಿ ಅಧಿಕಾರಿಗಳು, ಇಬ್ಬರ ಮನೆಗಳ ಮೇಲೆ ಏಕಕಾಲದಲ್ಲಿ ಮಾಡಿದರು. ಇತರೆ ಆರೋಪಿಗಳ 9 ಸ್ಥಳಗಳಲ್ಲೂ ಶೋಧ ನಡೆಸಿದರು.

ಸಹಕಾರನಗರದಲ್ಲಿರುವ ಅಮ್ರಿತ್ ಪೌಲ್ ಮನೆ ಹಾಗೂ ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್‌ನಲ್ಲಿರುವ ಶಾಂತಕುಮಾರ್ ಮನೆಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ರಾತ್ರಿಯವರೆಗೂ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಕುಟುಂಬದವರ ವಿಚಾರಣೆ: ‘ಅಮ್ರಿತ್ ಪೌಲ್ ಹಾಗೂ ಶಾಂತಕುಮಾರ್, ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಮನೆಗಳಲ್ಲಿ ಶೋಧ ನಡೆಸಿದ ಇ.ಡಿ ಐವರು ಅಧಿಕಾರಿಗಳ ತಂಡ, ಕುಟುಂಬಸ್ಥರನ್ನು ವಿಚಾರಣೆ ನಡೆಸಿತು. ಹಣ ವರ್ಗಾವಣೆಗೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ಸಹ ನಡೆಸಿತು’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT