ಭಾನುವಾರ, ಜೂನ್ 26, 2022
26 °C

ಪಿಎಸ್‌ಐ ನೇಮಕಾತಿ ಅಕ್ರಮ: ಮತ್ತೆ ನಾಲ್ವರ ಜಾಮೀನು ಅರ್ಜಿ ತಿರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಂದರ್ಭಿಕ ಚಿತ್ರ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದಲ್ಲಿ ಬಂಧಿತರಾದ ನಾಲ್ವರ ಜಾಮೀನು ಅರ್ಜಿಯನ್ನು ಇಲ್ಲಿನ ಮೂರನೇ ಜೆಎಂಎಫ್‌ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ.

ನಗರದ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ, ಮುಖ್ಯಶಿಕ್ಷಕ ಕಾಶಿನಾಥ ಹಣಮಂತರಾಯ ಚಿಲ್, ಪ್ರಮುಖ ಆರೋಪಿ ರುದ್ರಗೌಡ ಡಿ. ಪಾಟೀಲ ಮತ್ತು ಅಭ್ಯರ್ಥಿ ಎನ್‌.ವಿ. ಸುನೀಲಕುಮಾರ ಅರ್ಜಿಗಳನ್ನು, ಮೂರನೇ ಜೆಎಂಎಫ್‌ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ನೇಸರಗಿ ತಿರಸ್ಕರಿಸಿದರು.

ಸಿಐಡಿ ಪರ ಸಹಾಯಕ ಸರ್ಕಾರಿ ಅಭಿಯೋಜಕ ಶಿವಶರಣಪ್ಪ ಹೋತಪೇಟ ವಾದ ಮಂಡಿಸಿದರು. 2021ರ ಅಕ್ಟೋಬರ್‌ 3ರಂದು 545 ಪಿಎಸ್ಐ ನೇಮಕಾತಿಗಾಗಿ ಪರೀಕ್ಷೆ ನಡೆದಿತ್ತು. ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆ ಬರೆದ 11 ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಇದ್ದರು. 7 ಅಭ್ಯರ್ಥಿಗಳೂ ಸೇರಿ ಒಟ್ಟು 32 ಮಂದಿಯನ್ನು ಸಿಐಡಿ ತಂಡ ಬಂಧಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು