ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ನಗರದ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ರಾಜ್ಯ ವಕ್ತಾರ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ದಿವ್ಯಾ ಹಾಗರಗಿ ಅವರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಅವರು ಪಕ್ಷದ ನಾಯಕಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದಿವ್ಯಾ ಹಾಗರಗಿ ಅಥವಾ ಯಾರೇ ಅಕ್ರಮದಲ್ಲಿ ಭಾಗವಹಿಸಿದ್ದರೆ ಅದನ್ನು ಪಕ್ಷ ಮತ್ತು ಸರ್ಕಾರ ಸಹಿಸಿಕೊಳ್ಳುವುದಿಲ್ಲ. ಅಕ್ರಮ ನಡೆದಿರುವುದು ಸಾಬೀತಾದರೆ ಶಿಕ್ಷೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರವು ಈ ವಿಷಯದ ಕುರಿತು ಸಿಐಡಿ ತನಿಖೆ ನಡೆಸಲು ಸೂಚಿಸಿದೆ ಎಂದು ತಿಳಿಸಿದ್ದಾರೆ.

ಗೃಹ ಸಚಿವರೊಂದಿಗಿನ ಫೋಟೊ ವೈರಲ್: ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ದಿವ್ಯಾ ಹಾಗರಗಿ ಹಾಗೂ ಪತಿ ರಾಜೇಶ್ ಹಾಗರಗಿ ಭೇಟಿ ಮಾಡಿರುವ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಅವರೂ ಚಿತ್ರದಲ್ಲಿದ್ದಾರೆ.

ಅಲ್ಲದೇ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದಿವ್ಯಾ ಅವರನ್ನು ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಸದಸ್ಯೆಯನ್ನಾಗಿ ನೇಮಕ ಮಾಡಲಾಗಿತ್ತು.

ಇದನ್ನೂ ಓದಿ–ಪಿಎಸ್ಐ ನೇಮಕಾತಿ ಪರೀಕ್ಷೆಯ ಹಗರಣ: ತನಿಖೆ ಚುರುಕುಗೊಳಿಸಿದ ಸಿಐಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.