ಗುರುವಾರ , ಆಗಸ್ಟ್ 11, 2022
26 °C
ಸಿಐಡಿ ತನಿಖೆ ಮುಗಿದ ನಂತರ ದಿನಾಂಕ ನಿಗದಿ

ಪಿಎಸ್‌ಐ ನೇಮಕಾತಿ ಮರು‍ಪರೀಕ್ಷೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಿಐಡಿ ತನಿಖೆ ಪೂರ್ಣಗೊಂಡ ನಂತರ ಪಿಎಸ್‌ಐ ನೇಮಕಾತಿ ಮರುಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಯ ವಿಚಾರದಲ್ಲಿ ಸಿಐಡಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಬೇರೆ ಬೇರೆಯವರು ಒತ್ತಡ ಹಾಕಬಹುದು. ಯಾವುದಕ್ಕೂ ಸೊಪ್ಪು ಹಾಕುವುದಿಲ್ಲ. ತನಿಖೆ ಮುಂದುವರೆಯಲಿದೆ. ಪರೀಕ್ಷೆಯಲ್ಲಿ ಅಕ್ರಮ ಮಾಡುವವರು ಎದೆಮುಟ್ಟಿ ನೋಡಿಕೊಳ್ಳುವಂತೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಹಣವಿದ್ದರೆ ಮಾತ್ರ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗುತ್ತೇವೆ ಎಂಬ ನಂಬಿಕೆಯನ್ನು ಪಾರದರ್ಶಕ ತನಿಖೆಯ ಮೂಲಕ ಹೋಗಲಾಡಿಸಲಿದ್ದೇವೆ ಎಂದು ಜ್ಞಾನೇಂದ್ರ ಭರವಸೆ ನೀಡಿದರು.

‘ಸಿಐಡಿ ತನಿಖೆಯಲ್ಲಿ ಸಾಕ್ಷ್ಯಾಧಾರಗಳು ಸಿಗುವವರೆಗೂ ಯಾರನ್ನೂ ಮುಟ್ಟುವುದಿಲ್ಲ. ಸರಿಯಾದ ಸಾಕ್ಷ್ಯಾಧಾರಗಳು ದೊರೆತರೆ ಯಾರನ್ನೂ ಬಿಡೊಲ್ಲ. ದೊಡ್ಡ ದೊಡ್ಡ ಪೊಲೀಸ್ ಅಧಿಕಾರಿಗಳನ್ನು ಬಿಟ್ಟಿಲ್ಲ. ಈ ವಿಚಾರದಲ್ಲಿ ತನಿಖಾ ಸಂಸ್ಥೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ’ ಎಂದು ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್‌ಪೌಲ್ ಅವರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು