ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಪೌಲ್‌ ಜಾಮೀನು ಅರ್ಜಿ ವಜಾ

Last Updated 16 ಆಗಸ್ಟ್ 2022, 21:40 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಐಪಿಎಸ್‌ ಅಧಿಕಾರಿ ಅಮ್ರಿತ್‌ ಪೌಲ್‌ಗೆ ಜಾಮೀನು ನೀಡಲು ಸೆಷನ್ಸ್‌ ಕೋರ್ಟ್‌ ನಿರಾಕರಿಸಿದೆ.

ಬೆಂಗಳೂರು ನಗರ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದನ್ಯಾಯಾಧೀಶ ಯಶವಂತ ಕುಮಾರ್‌ ಅವರು ಮಂಗಳ ವಾರ ಪೌಲ್‌ ಅವರ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದರು. ‘ಗಂಭೀರ ಸ್ವರೂಪದ ಈ ಪ್ರಕರಣ ಇನ್ನೂ ತನಿಖಾ ಹಂತದಲ್ಲಿರುವಾಗ ಜಾಮೀನು ನೀಡುವುದು ಉಚಿತವಲ್ಲ’ ಎಂಬ ಪ್ರಾಸಿಕ್ಯೂಷನ್‌ ಪರ ವಕೀಲ ಪಿ.ಪ್ರಸನ್ನ ಕುಮಾರ್ ಅವರ ವಾದವನ್ನು ನ್ಯಾಯಾಧೀಶರು ಮನ್ನಿಸಿದ್ದಾರೆ.

ಪೌಲ್‌, ಈ ಹಗರಣದ 35ನೇ ಆರೋಪಿಯಾಗಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮೊದಲು ಜಾಮೀನು ಕೋರಿ ಅಮ್ರಿತ್‌ ಪೌಲ್‌ ಸಲ್ಲಿಸಿದ್ದ ಅರ್ಜಿಯನ್ನು ಒಂದನೇ ಎಸಿ ಎಂಎಂ ನ್ಯಾಯಾಲಯ ವಜಾಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT