ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿಯಲ್ಲದವರಿಗೆ ಆದೇಶ ಪತ್ರ ಕೊಡಿ; ಅಭ್ಯರ್ಥಿಗಳ ಅಳಲು

Last Updated 12 ಸೆಪ್ಟೆಂಬರ್ 2022, 19:20 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣ ರಾಜಕೀಯ ತಿರುವು ಪಡೆಯುತ್ತಿದ್ದು, ನ್ಯಾಯಯುತವಾಗಿ ಪರೀಕ್ಷೆ ಬರೆದು ಆಯ್ಕೆಯಾದ ತಮಗೆ ಅನ್ಯಾಯವಾಗಿದೆ ಎಂದು ಹಲವು ಅಭ್ಯರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

545 ಪಿಎಸ್‌ಐ ಹುದ್ದೆಗಳ ನೇಮಕಾತಿ ಹಗರಣದ ಪರ–ವಿರುದ್ಧ ರಾಜಕೀಯ ಪಕ್ಷಗಳು ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿವೆ. ಕಷ್ಟಪಟ್ಟು ಓದಿ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ನಮ್ಮ ಗೋಳು ಯಾರೂ ಕೇಳುತ್ತಿಲ್ಲ. ಕೆಲವು ಅಭ್ಯರ್ಥಿಗಳು ಮಾಡಿದ ತಪ್ಪಿಗೆ ಎಲ್ಲರಿಗೂ ಶಿಕ್ಷೆ ನೀಡುತ್ತಿದ್ದಾರೆ. ಇಂತಹ ಸಂದಿಗ್ಧದಲ್ಲಿ ಪ್ರಾಮಾಣಿಕ ಅಭ್ಯರ್ಥಿಗಳ ಹಿತ ಕಾಯಬೇಕಾದ ಸರ್ಕಾರ, ವಿರೋಧ ಪಕ್ಷಗಳು ಮೌನವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಕ್ರಮದಲ್ಲಿ ಭಾಗಿಯಾದ ಅಭ್ಯರ್ಥಿಗಳನ್ನು ಹೊರಗಿಟ್ಟು, ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳತ್ತ ಗಮನ ಹರಿಸುತ್ತಿಲ್ಲ. ಸಹಾಯಕ ಪ್ರಾಧ್ಯಾಪಕರ ಹುದ್ದೆಗಳೂ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಹಗರಣಗಳು ಕೇಳಿಬಂದಿವೆ. ಅಲ್ಲಿ ಅಕ್ರಮದಲ್ಲಿ ಭಾಗಿಯಾದವರನ್ನು ಹೊರಗಿಟ್ಟು, ಉಳಿದವರಿಗೆ ನೇಮಕಾತಿ ಆದೇಶ ನೀಡಲಾಗುತ್ತಿದೆ. ಪಿಎಸ್‌ಐ ಹುದ್ದೆಗಳಿಗೆ ಮಾತ್ರ ಮರು ಪರೀಕ್ಷೆಯ ಘೋಷಣೆ ಮಾಡಿರುವುದು ಸರ್ಕಾರದ ಇಬ್ಬಗೆಯ ನೀತಿಗೆ ಸಾಕ್ಷಿ ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT