ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಅಕ್ರಮ ನೇಮಕಾತಿ; ಮತ್ತೊಮ್ಮೆ ಎಡಿಜಿಪಿ ವಿಚಾರಣೆ

Last Updated 27 ಮೇ 2022, 19:14 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮ್ರಿತ್ ಪೌಲ್ ಅವರನ್ನು ಎರಡು ದಿನ ವಿಚಾರಣೆ ಮಾಡಿರುವ ಸಿಐಡಿ ಅಧಿಕಾರಿಗಳು, ಮೂರನೇ ಬಾರಿ ಮತ್ತೊಮ್ಮೆ ವಿಚಾರಣೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

‘ಬುಧವಾರ, ಗುರುವಾರ ವಿಚಾರಣೆಗೆ ಹಾಜರಾಗಿದ್ದ ಪೌಲ್ ಕೆಲ ಪ್ರಶ್ನೆಗಳಿಗೆ ಲಿಖಿತ ಉತ್ತರ ನೀಡಿದ್ದಾರೆ. ಅದರ ಪರಿಶೀಲನೆ ನಡೆಸಲಾಗುತ್ತಿದ್ದು, ಮತ್ತಷ್ಟು ಪ್ರಶ್ನೆಗಳನ್ನು ಸಿದ್ಧಪಡಿಸಿ ಪೌಲ್ ಅವರನ್ನು ವಿಚಾರಣೆಗೆ ಕರೆಯಬೇಕಿದೆ. ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಹಾಗೂ ಇತರೆ ನೌಕರರ ಹೇಳಿಕೆಯ ಜೊತೆ ಪೌಲ್ ಹೇಳಿಕೆ ಹೋಲಿಕೆ ಮಾಡಲಾಗುತ್ತಿದೆ. ತಮ್ಮದೇನೂ ತಪ್ಪಿಲ್ಲವೆಂದು ಎಡಿಜಿಪಿ ಹೇಳುತ್ತಿದ್ದಾರೆ. ಕೆಲ ಪುರಾವೆಗಳು ಅವರ ಮೇಲೆ ಅನುಮಾನ ಬರುವಂತಿದೆ. ಇನ್ನೊಮ್ಮೆ ವಿಚಾರಣೆ ನಡೆಸಿದ ಬಳಿಕವೇ ಪೌಲ್‌ ಪಾತ್ರದ ಬಗ್ಗೆ ತಿಳಿಯಲಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT