ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ: ಜ್ಞಾನಜ್ಯೋತಿ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ ಶರಣು

Last Updated 2 ಮೇ 2022, 6:34 IST
ಅಕ್ಷರ ಗಾತ್ರ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಇಲ್ಲಿನ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ ಸಿಐಡಿ ಅಧಿಕಾರಿಗಳ ಎದುರು ಸೋಮವಾರ ಶರಣಾಗಿದ್ದಾರೆ.

ಸಿಐಡಿ ವಶದಲ್ಲಿರುವ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಒಡೆತನದ ಈ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂದು ತನಿಖೆ ನಡೆಯುತ್ತಿದೆ.

‘ತಮ್ಮ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ ಅವರೇ ಯೋಜನೆ ರೂಪಿಸಿದ್ದರು’ ಎಂದು ವಿಚಾರಣೆ ವೇಳೆ ದಿವ್ಯಾ ಹಾಗರಗಿ ಹೇಳಿಕೆ ನೀಡಿದ ಮರುದಿನವೇ ಕಾಶಿನಾಥ ಶರಣಾಗಿದ್ದಾರೆ.

ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ, ಜಲಸಂಪನ್ಮೂಲ ಇಲಾಖೆಯ ಸಹಾಯಕ ಎಂಜಿನಿಯರ್‌ ಮಂಜುನಾಥ ಮೇಳಕುಂದಿ ಭಾನುವಾರ ಸಿಐಡಿಗೆ ಶರಣಾಗಿದ್ದರು. ಪ್ರಕರಣ ಬಯಲಿಗೆ ಬರಲು ಕಾರಣರಾಗಿದ್ದ ಶ್ರೀಧರ ಪವಾರ ಅವರನ್ನು ಭಾನುವಾರ ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT