ಹತ್ತು ವರ್ಷ ಪೂರೈಸಿರುವ ರಾಜ್ಯದ ಸರ್ಕಾರಿ ವಸತಿಶಾಲೆಗಳಲ್ಲಿ ಪಿಯು ಕಾಲೇಜು: ಸಿಎಂ

ಬೆಂಗಳೂರು: ಹತ್ತು ವರ್ಷ ಪೂರೈಸಿರುವ ರಾಜ್ಯದ ಸರ್ಕಾರಿ ವಸತಿಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ ಪೂರ್ವ ಶಿಕ್ಷಣ ಆರಂಭಿಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಜ್ಞಾನ ಮೇಳ–2023 ಉದ್ಘಾಟಿಸಿ ಅವರು ಮಾತನಾಡಿದರು.
ಒಂದು ವಸತಿಶಾಲೆಗೆ ₹30 ಕೋಟಿ ವೆಚ್ಚವಾಗುತ್ತದೆ. ಆದರೂ ಮಕ್ಕಳಿಗೆ ಸೂಕ್ತ ವ್ಯವಸ್ಥೆ ಆಗಿಲ್ಲ. ಇದು ಹಿಂದಿನ ಸರ್ಕಾರಗಳ ಬಳುವಳಿ. ಗುತ್ತಿಗೆ ಆಧಾರಿತ ವ್ಯವಸ್ಥೆಯಿಂದ ಇಂತಹ ಪರಿಸ್ಥಿತಿ ಎದುರಾಗಿದೆ. ಮೂರು ವರ್ಷಗಳಿಂದ ಸುಧಾರಣೆಯಾಗುತ್ತಿದೆ. ಶಾಲೆಗಳ ಸಂಖ್ಯೆ ಒಂದು ಸಾವಿರ ತಲುಪಿದೆ. ಪರಿಶಿಷ್ಟ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸುವುದೇ ವಸತಿಶಾಲೆಗಳ ಮೊದಲ ಆದ್ಯತೆ. ಅದಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.
ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.