ಶನಿವಾರ, ಜುಲೈ 2, 2022
20 °C

ಪಿಯು ಅರ್ಥಶಾಸ್ತ್ರ ಪರೀಕ್ಷೆಗೆ ಹಾಜರಾಗದ 28 ಸಾವಿರ ವಿದ್ಯಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಗೆ ಗೈರುಹಾಜರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ನಡೆದ ಅರ್ಥಶಾಸ್ತ್ರ ವಿಷಯಕ್ಕೆ 28 ಸಾವಿರ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಈ ಬಾರಿ ಒಟ್ಟು 4,12,593 ವಿದ್ಯಾರ್ಥಿಗಳು ಅರ್ಥಶಾಸ್ತ್ರ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು.

ಗೈರು ಹಾಜರಾದವರಲ್ಲಿ 20,147 ಹೊಸಬರು, 5,956 ಖಾಸಗಿ ಅಭ್ಯರ್ಥಿಗಳು ಮತ್ತು 2019 ಪುನರಾವರ್ತಿತ ಅಭ್ಯರ್ಥಿಗಳು ಸೇರಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ 1,642, ಮೈಸೂರಿನಲ್ಲಿ 1,115, ಚಿತ್ರದುರ್ಗದಲ್ಲಿ 1,076 ಮತ್ತು ಬೆಂಗಳೂರು ದಕ್ಷಿಣದಲ್ಲಿ 1,001 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು