ಭಾನುವಾರ, ಸೆಪ್ಟೆಂಬರ್ 27, 2020
27 °C

ಪಿಯು ಉಪನ್ಯಾಸಕರ ನೇಮಕಾತಿ ಕೌನ್ಸೆಲಿಂಗ್‌ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,203 ಉಪನ್ಯಾಸಕ ಹುದ್ದೆಗಳ ನೇಮಕಾತಿಗೆ ಕೌನ್ಸೆಲಿಂಗ್ ಪ್ರಕ್ರಿಯೆ‌ ರಾಜ್ಯದ ಎಲ್ಲ 30 ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳ ಕೆ–ಸ್ವಾನ್‌ ಕೊಠಡಿಯಲ್ಲಿ ಸೋಮವಾರ ಆರಂಭವಾಗಲಿದೆ.

‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನೇಮಕಾತಿ ಪ್ರಕ್ರಿಯೆ ನಡೆಸಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಗೆ ಸಂಬಂಧಿಸಿದಂತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸೋಮವಾರ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆವರೆಗೆ ಇಂಗ್ಲಿಷ್‌ ವಿಷಯದ ಹುದ್ದೆಗಳಿಗೆ (ಕಲ್ಯಾಣ ಕರ್ನಾಟಕೇತರ) ಕೌನ್ಸೆಲಿಂಗ್‌ ನಡೆಯಲಿದೆ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

‘ಉಳಿದ ವಿಷಯಗಳ ವೇಳಾಪಟ್ಟಿ ಹಾಗೂ ಇತರ ಮಾಹಿತಿಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ (www.pue.kar.nic.in) ಪ್ರಕಟಿಸಲಾಗುವುದು. ಆಯ್ಕೆಗೊಂಡ ಅಭ್ಯರ್ಥಿಗಳು ವೇಳಾಪಟ್ಟಿಗೆ ಅನುಸಾರವಾಗಿ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾಧಿಕಾರಿಗಳ ಕೆ-ಸ್ವಾನ್ ಕೊಠಡಿಯಲ್ಲಿ ಕೌನ್ಸೆಲಿಂಗ್‌ಗೆ ಹಾಜರಾಗಬಹುದು’ ಎಂದೂ ಅವರು ಹೇಳಿದ್ದಾರೆ.

ಕೋವಿಡ್‌ ಕಾರಣಕ್ಕೆ ವೆಚ್ಚಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಎಲ್ಲ ನೇಮಕಾತಿ ಪ್ರಕ್ರಿಯೆಗಳಿಗೆ ಆರ್ಥಿಕ ಇಲಾಖೆ ತಡೆ ನೀಡಿದ್ದರೂ, ಮುಖ್ಯಮಂತ್ರಿ ಮಧ್ಯಪ್ರವೇಶದಿಂದ ನೇಮಕಾತಿಗೆ ಕೌನ್ಸೆಲಿಂಗ್‌ ಆರಂಭಿಸಲು ಅನುಮೋದನೆ ಸಿಕ್ಕಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು