ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜು.31ರೊಳಗೆ ದ್ವಿತೀಯ ಪಿಯು ಫಲಿತಾಂಶ: ಸುರೇಶ್ ಕುಮಾರ್

Last Updated 26 ಜೂನ್ 2021, 5:19 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 31ರೊಳಗೆ ಫಲಿತಾಂಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳ 12ನೇ ತರಗತಿ ಮಕ್ಕಳಿಗೆ ಜು.31ರೊಳಗೆ ಫಲಿತಾಂಶ ನೀಡಲು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ರಾಜ್ಯದಲ್ಲೂ ಅಷ್ಟರೊಳಗೆ ಫಲಿತಾಂಶ ನೀಡುತ್ತೇವೆ’ ಎಂದು ಸ್ಪಷ್ಟಪಡಿಸಿದರು.

ಎಸ್ಸೆಸ್ಸೆಲ್ಸಿ ವೇಳಾಪಟ್ಟಿ ಶೀಘ್ರ: ‘ಶೀಘ್ರದಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಬೇಡ, ಅತ್ಯಂತ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಕೋವಿಡ್ ಕಾರ್ಯಪಡೆ ನೀಡಿರುವ ಮಾರ್ಗಸೂಚಿ ಅನುಸಾರ ಸಿದ್ಧತೆಗಳನ್ನು ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರೀಕ್ಷೆ ಸಂಬಂಧ ಅಧಿಕಾರಿಗಳ ಕರ್ತವ್ಯಗಳ ಬಗ್ಗೆಯೂ ಆದೇಶ ಮಾಡಲಾಗಿದೆ. ಪರೀಕ್ಷೆಗೆ ಕೆಲ ದಿನಗಳು ಬಾಕಿ ಇರುವಾಗಲೇ ವೇಳಾಪಟ್ಟಿ ಪ್ರಕಟಿಸಲಾಗುವುದು’ ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT