ಮಂಗಳವಾರ, ಮಾರ್ಚ್ 28, 2023
23 °C

ಇದೇ 20ರ ವೇಳೆಗೆ ಪಿಯುಸಿ ಫಲಿತಾಂಶ: ಎಸ್. ಸುರೇಶ್‌ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇದೇ 20ರ ವೇಳೆಗೆ ಪ್ರಕಟಿಸಲಾಗುವುದು‘ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಹೇಳಿದರು. 

ದ್ವಿತೀಯ ಪಿಯುಸಿ ಫಲಿತಾಂಶವನ್ನು ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ನಿರ್ಣಯಿಸುವುದರಿಂದ, ಈ ವಿದ್ಯಾರ್ಥಿಗಳಿಗೆ ತಮ್ಮ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಆನ್‌ಲೈನ್ ಮೂಲಕ ನೋಡಿ ಸರಿಪಡಿಸಿಕೊಳ್ಳಲು ಅವಕಾಶ ಇದೆ.

ಎಸ್‌ಟಿಎಸ್‌ ವೆಬ್‌ ಪೋರ್ಟಲ್‌ನಲ್ಲಿ https://sts.karnataka.gov.in/SATSPU/# ಈ ಲಿಂಕ್ ಬಳಸಿ ಅಂಕಗಳನ್ನು ಪರಿಶೀಲಿಸಬಹುದು. ಈ ವೆಬ್ ಪೋರ್ಟಲ್‌ನಲ್ಲಿ ಇಲಾಖೆ ನೀಡಿರುವ ಎಸ್‌ಎಟಿಎಸ್ ಸಂಖ್ಯೆ ಅಥವಾ ಕಾಲೇಜಿನಲ್ಲಿ ನೀಡಿದ್ದ ವಿದ್ಯಾರ್ಥಿ ಸಂಖ್ಯೆ ಅಥವಾ ಪರೀಕ್ಷಾ ನೋಂದಣಿ ಸಂಖ್ಯೆ ಈ ಮೂರರಲ್ಲಿ ಯಾವುದಾದರೂ ಒಂದನ್ನು ನಮೂದಿಸಿ ಪರಿಶೀಲಿಸಬಹುದು. ಫಲಿತಾಂಶದಲ್ಲಿ ಅಥವಾ ಅಂಕಗಳಲ್ಲಿ ವ್ಯತ್ಯಾಸಗಳಿದ್ದರೆ ತಮ್ಮ ಶಾಲೆ ಅಥವಾ ಕಾಲೇಜಿನ ಪ್ರಾಂಶುಪಾಲರನ್ನು ಇದೇ 12ರ ಒಳಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಪ್ರಾಂಶುಪಾಲರು ಅದನ್ನು ಸರಿಪಡಿಸಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.

ಎಲ್ಲ ವಿದ್ಯಾರ್ಥಿಗಳಿಗೆ ಪ್ರವೇಶ: ‘ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿ.ಯು.ಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ’ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

‘ರಾಜ್ಯದ ಸರ್ಕಾರಿ ಪಿಯು ಕಾಲೇಜಗಳಲ್ಲಿ ಪಿಯುಸಿ ಸೀಟುಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಶಾಲೆಗಳಿಂದಲೂ ಸೀಟುಗಳ ಹೆಚ್ಚಳದ ಕೋರಿಕೆಗಳು ಬಂದರೆ ಪರಿಗಣಿಸಿ ಎಲ್ಲ ವಿದ್ಯಾರ್ಥಿಗಳಿಗೂ ಪಿಯುಸಿ ಸೀಟು ದೊರೆಯುವಂತೆ ವ್ಯವಸ್ಥೆ ಮಾಡಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು